ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ರೈತರು ಪಟ್ಟಣದಲ್ಲಿ ಶನಿವಾರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮೊಹರೆ ವೃತ್ತದಿಂದ ಮೆರವಣಿಗೆ ಆರಂಭಿಸಿದ ವಿವಿಧ ಸಂಘಟನೆಗಳು ಹಾಗೂ ರೈತರು, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ರೈತರು ಪಟ್ಟಣದಲ್ಲಿ ಶನಿವಾರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮೊಹರೆ ವೃತ್ತದಿಂದ ಮೆರವಣಿಗೆ ಆರಂಭಿಸಿದ ವಿವಿಧ ಸಂಘಟನೆಗಳು ಹಾಗೂ ರೈತರು, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಬ್ಬು ಬೆಳೆಗಾರರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು. ರೈತರ ಮನವಿಗೆ ಸ್ಪಂದಿಸಿದ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರಾದ ಸಂಗನಗೌಡ ಬಿರಾದಾರ, ಶಂಕರಗೌಡ ಪಾಟೀಲ, ಸಿದ್ದನಗೌಡ ಜಲಪೂರ, ಸಾಹೇಬಗೌಡ ರೆಡ್ಡಿ, ವೀರೇಶ ಕುದುರಿ, ಪ್ರಕಾಶ ಗುಡಿಮನಿ, ಅಜೀಜ ಯಲಗಾರ, ರಾಮು ದೇಸಾಯಿ, ಬಸವರಾಜ್ ಕಲ್ಲೂರ, ರಾಜು ಸಿಂದಗೇರಿ, ಮಂಜು ಇಂಗಳಗಿ ಸೇರಿದಂತೆ ಹಲವಾರು ಜನ ಮುಖಂಡರು ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಬ್ಬಿಗೆ ದರ ನಿಗದಿ ಮಾಡಲು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪಿಎಸ್ಐ ಸಚಿನ್ ಆಲಮೇಲಕರ ಅವರ ನೇತೃತ್ವದ ತಂಡ ಸಂಚಾರ ದಟ್ಟಣೆ ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಸುನಿಲ್ ದೇಸಾಯಿ, ಕಾಶಿನಾಥ ಕೋರಿ, ಮಡು ದಿಂಡವಾರ, ಕಾಸು ಜಿರ್ಲಿ, ರಾಚೋಟಿ ಹಿರೇಮಠ, ದಿನೇಶಗೌಡ ಪಾಟೀಲ, ಬಸನಗೌಡ ಬಿರಾದಾರ, ಶಾಂತಪ್ಪ ದೇವೂರ, ರಮೇಶ ದಳವಾಯಿ, ನಿಂಗಣ್ಣ ಹುಲಸಗುಂದ, ಆನಂದ ಗುಣಕಿ, ಪ್ರಕಾಶ ಯಾದಗಿರಿ, ಪ್ರಭುಗೌಡ ಬಿರಾದಾರ, ಮಲ್ಲು ಕಡಕೋಳ, ಶ್ರೀಕಾಂತ ಭಜಂತ್ರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.