ಸಾರಾಂಶ
ದಾಬಸ್‌ಪೇಟೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಖಾಸಗಿ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿನಗರ ಬಳಿ ನಡೆದಿದೆ.
ದಾಬಸ್‌ಪೇಟೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಖಾಸಗಿ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿನಗರ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದ ನಿವಾಸಿ ಮನೋಜ್(19) ಮೃತ ಯುವಕ. ಡಿ.6ರಂದು ಮಧ್ಯಾಹ್ನ 1 ಗಂಟೆಯಲ್ಲಿ ಕೆಲಸಕ್ಕೆ ತೆರಳಲು ಮನೋಜ್ ರಸ್ತೆ ದಾಟುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಯಂಟಗಾನಹಳ್ಳಿ ಕಡೆಯಿಂದ ಬಂದ ಖಾಸಗಿ ಕಂಪನಿಯ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.