ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ನಲ್ಲಿ ಸಂಘಟನಾ ಚಟುವಟಿಕೆ ಗಳು ಗರಿಗೆದರಿವೆ. ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪಕ್ಷದೊಳಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
ಇಂದರಪಾಶ ಚಿಂಚರಕಿ
ಕನ್ನಡಪ್ರಭ ವಾರ್ತೆ ಮಸ್ಕಿಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಮಸ್ಕಿ ಕಾಂಗ್ರೆಸ್ನಲ್ಲಿ ಸಂಘಟನಾ ಚಟುವಟಿಕೆ ಗಳು ಗರಿಗೆದರಿವೆ. ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪಕ್ಷದೊಳಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
ಮಸ್ಕಿಯಲ್ಲಿ ಇತ್ತೀಚೆಗೆ ನಡೆದ ಸಂಘಟನಾ ಸೃಜನ ಅಭಿಯಾನ ಕಾರ್ಯಕ್ರಮದಲ್ಲಿ ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ರಾಜಶೇಖರ ಪಾಟೀಲ್ ಹುಮನಾಬಾದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಸಕ್ತಿ ಹೊಂದಿರುವ ಸುಮಾರು 8ಕ್ಕೂ ಅಧಿಕ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸಲ್ಲಿಕೆಯಾಗಿವೆ. ಪಕ್ಷದ ಸಂಘಟನೆ, ಸ್ಥಳೀಯ ರಾಜಕೀಯ ಪರಿಸ್ಥಿತಿ ಹಾಗೂ ಅಧ್ಯಕ್ಷ ಸ್ಥಾನದ ಆಯ್ಕೆ ಕುರಿತು ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು. ಸಂಗ್ರಹಿಸಿದ ಅರ್ಜಿಗಳು ಹಾಗೂ ಅಭಿಪ್ರಾಯಗಳ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸಲಾಗುತ್ತಿದ್ದು. ಅಂತಿಮ ಆಯ್ಕೆ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದೆ.ಹಾಲಿ ಅಧ್ಯಕ್ಷರ ನಿರಾಸಕ್ತಿ : ಕಳೆದ 8 ವರ್ಷಗಳಿಂದ ಸತತವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಲ್ಲಿಯೇ ಮುಂದುವರೆದಿದ್ದ ಮಲ್ಲಿಕಾರ್ಜುನ್ ಪಾಟೀಲ್ ಅವರು ಈ ಬಾರಿ ನಗರ ಘಟಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲು ನಿರಾಸಕ್ತಿ ಹೊಂದಿದ್ದಾರೆಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಆದರೆ ಮುಂಬರುವ ದಿನಗಳಲ್ಲಿ ಯಾವ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್ ಅಧ್ಯಕ್ಷರ ಆಯ್ಕೆ ಮಹತ್ವ ಪಡೆದುಕೊಂಡಿದ್ದು, ಭವಿಷ್ಯದ ಎಲೆಕ್ಷನ್ ದೃಷ್ಠಿಕೋನದಲ್ಲಿ ಸಂಘಟನಾ ಜವಾಬ್ದಾರಿ ವಹಿಸುವ ಹೊಸ ಪದಾಧಿಕಾರಿಗಳ ಆಯ್ಕೆ ಸಹಜವಾಗಿಯೇ ರಾಜಕೀಯ ಕುತೂಹಲ ಮೂಡಿಸಿದೆ. ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರೊಂದಿಗೆ ಸಮನ್ವಯ, ಹಿರಿಯ ಮುಖಂಡರ ಅಭಿಪ್ರಾಯ, ಕಾರ್ಯಕರ್ತರ ಬೆಂಬಲ ಹಾಗೂ ಗ್ರಾಮೀಣ ಭಾಗದಲ್ಲಿ ಪಕ್ಷದ ಸಂಘಟನಾ ಸಾಮರ್ಥ್ಯ ಸೇರಿದಂತೆ ಹಲವು ಅಂಶಗಳು ಆಯ್ಕೆ ಪ್ರಕ್ರಿಯೆಯಲ್ಲಿ ಚರ್ಚೆಗೆ ಬಂದಿವೆ ಎನ್ನಲಾಗಿದೆ. ನಗರ ಮತ್ತು ಗ್ರಾಮೀಣ ಘಟಕಗಳಿಗೆ ಯಾರಿಗೆ ಅವಕಾಶ ಸಿಗಲಿದೆ? ಹಾಲಿ ಪದಾಧಿಕಾರಿಗಳಿಗೆ ಮುಂದುವರಿಯುವ ಅವಕಾಶ ದೊರೆಯಲಿದೆಯೇ ಅಥವಾ ಹೊಸಬರಿಗೆ ಮಣೆ ಹಾಕಲಿದ್ದಾರೆಯೇ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ.ನಗರ ಘಟಕಕ್ಕೆ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮುಂದುವರಿಕೆಗೆ ಒಲವು? ಗ್ರಾಮೀಣ ಘಟಕದ ಅಧ್ಯಕ್ಷರು ಸಹ ಮುಂದುವರೆಯುವರೆ? ಮಸ್ಕಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಅವರ ಮುಂದುವರಿಕೆಯ ಕುರಿತು ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ. 2018ರಲ್ಲಿ ನಗರ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಅವರು, ಅಂದಿನಿಂದ ಇಲ್ಲಿಯವರೆಗೆ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಅವಧಿಗೂ ಅವರನ್ನೇ ಮುಂದುವರಿಸಬೇಕೆಂಬ ಅಭಿಪ್ರಾಯವನ್ನು ಹಲವು ಕಾರ್ಯಕರ್ತರು ಹಾಗೂ ಮುಖಂಡರು ವೀಕ್ಷಕರ ಮುಂದೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಗರ ಘಟಕದ ಅಧ್ಯಕ್ಷರಾಗಿ ಅವರ ಮುಂದುವರಿಕೆಗೆ ಬೆಂಬಲ ವ್ಯಕ್ತವಾಗಿರುವುದು ಆಯ್ಕೆ ಪ್ರಕ್ರಿಯೆಯಲ್ಲಿ ಗಮನ ಸೆಳೆದಿದೆ.
ಮಸ್ಕಿ ಕಾಂಗ್ರೆಸ್ ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಸಹ ಆಕಾಂಕ್ಷಿಯಾಗಿದ್ದು ಅರ್ಜಿಯನ್ನು ಸಲ್ಲಿಸಿದ್ದೇನೆ ಎಂದು ತೊಗರಿ ನಿಗಮದ ನಿರ್ದೇಶಕ ನಿರೂಪದೇಪ್ಪ ವಕೀಲರು ಹೇಳಿರು.