ಸಾರಾಂಶ
ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯ.
ವಿವಿಧ ಸ್ಪರ್ಧೆಗಳ ಕಾರ್ಯಕ್ರಮ 2025ರ ಅಂಗವಾಗಿ ನಡೆದ ಜಾನಪದ ನೃತ್ಯ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ
ಕನ್ನಡಪ್ರಭ ವಾರ್ತೆ ಕೊಪ್ಪಳಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ ಹೇಳಿದರು.
ನಗರದ ರೈಲ್ವೆ ಸ್ಟೇಷನ್ ಎದುರುಗಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಪ್ಪಳ ಸಂಯೋಗದಲ್ಲಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ 2025ರ ಅಂಗವಾಗಿ ನಡೆದ ಜಾನಪದ ನೃತ್ಯ ಉದ್ಘಾಟಿಸಿ ಮಾತನಾಡಿದರು.ಮಕ್ಕಳು ಗುರಿ ಇಟ್ಟುಕೊಂಡು ಅದನ್ನು ಸಾಧಿಸುವಂತಹ ಸಾಧನೆ ಮಾಡಬೇಕು. ಯಾವುದೇ ಅವಕಾಶ ಕಳೆದುಕೊಳ್ಳಬಾರದು. ಇಂತಹ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಮಾತನಾಡಿ, ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.ಸಿ.ಆರ್.ಪಿ. ರೇವಣಸಿದ್ದಪ್ಪ ಮಾತನಾಡಿ, ಇಂತಹ ಸ್ಪರ್ಧೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣಾ ಕುಬಕಡ್ಡಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಿಸಿದರು.ಶಾಲಾ ಮುಖ್ಯೋಪಾಧ್ಯಾಯ ನಾಗರತ್ನಾ ಹವಳೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬ ಸಾಬ್ ಇಲಾಹಿ ಕಾರ್ಯಕ್ರಮ ನಿರೂಪಿಸಿದರು.
ಶಾಲೆಯ ಸಹ ಶಿಕ್ಷಕಿ ಜಲಜಾಕ್ಷಿ ಸ್ವಾಗತಿಸಿದರು. ಮಾರುತಿ ಕಂಪ್ಲಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರ ವೃಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ಶಾಲೆಯ ಎಲ್ಲ ಮಕ್ಕಳು ಭಾಗವಹಿಸಿದ್ದರು.