ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.11ರಂದು ವಿವಿಧ ಹುದ್ದೆಗಳಿಗೆ ಜರಗುವ 13 ಪರೀಕ್ಷಾ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಈ ಪರಿದಿಯಲ್ಲಿನ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.11ರಂದು ವಿವಿಧ ಹುದ್ದೆಗಳಿಗೆ ಜರಗುವ 13 ಪರೀಕ್ಷಾ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಹಾಗೂ ಈ ಪರಿದಿಯಲ್ಲಿನ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಸದರಿ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನ್ವಯಿಸುವುದಿಲ್ಲ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು ಸದರಿ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಮುಚ್ಚಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಈ ಆದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತ ಕಲಂ 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿಸಲಾಗಿದೆ.- - -
-9ಕೆಡಿವಿಜಿ34: ಜಿ.ಎಂ.ಗಂಗಾಧರ ಸ್ವಾಮಿ