ಸಾರಾಂಶ
ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮುಖ್ಯ. ಸೋಲು-ಗೆಲವು ಮುಖ್ಯವಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಅಭಿಪ್ರಾಯ ಪಟ್ಟರು.
ಜಮಖಂಡಿ: ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮುಖ್ಯ. ಸೋಲು-ಗೆಲವು ಮುಖ್ಯವಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಅಭಿಪ್ರಾಯ ಪಟ್ಟರು.
ನಗರದ ಪೋಲೋ ಮೈದಾನದಲ್ಲಿ ಜಿಪಂ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಮಖಂಡಿ ಹಾಗೂ ಬನಹಟ್ಟಿ- ರಬಕವಿ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳಿಂದ ಮಾನಸಿಕ ಮತ್ತು ದೈಹಿಕ ದೃಢತೆ ಹೆಚ್ಚಾಗುತ್ತದೆ. ಪಾಠದ ಜತೆಗೆ ಆಟೋಟಗಳಲ್ಲಿ ಭಾಗವಹಿಸಬೇಕು. ಆಟದಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದೇ ಮುಖ್ಯವೆಂದರು.ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ, ಮಕ್ಕಳೆಲ್ಲರೂ ಕ್ರೀಡಾ ಮನೋಭಾವದಿಂದ ಆಟಗಳನ್ನು ಆಡಲು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ನಿರೂಪಣೆ ಮಾಡಿದರು. ಎರಡೂ ತಾಲೂಕಿನ ವಿವಿಧ ಶಾಲೆಯ ಮಕ್ಕಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದರು. ಶಿಕ್ಷಕರು ವಿದ್ಯಾರ್ಥಿಗಳು, ಅಧಿಕಾರಿಗಳು ಇದ್ದರು.