ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು

| Published : Feb 06 2025, 11:46 PM IST

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು
Share this Article
  • FB
  • TW
  • Linkdin
  • Email

ಸಾರಾಂಶ

ಠಾಣಾಧಿಕಾರಿ ಮಂಜುನಾಥ್‌ ಅವರಿಗೆ ಮನವಿ ಸಲ್ಲಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ತಪ್ಪಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಯ ಗ್ರಾಮ ಪಂಚಾಯಿತಿಯು ಕಾಂಗ್ರೆಸ್ ಆಡಳಿತದಲ್ಲಿದ್ದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಭಿವೃದ್ಧಿ ಸಹಿಸದ ಕೆಲವು ಕಿಡಿಗೇಡಿಗಳು ಪಂಚಾಯಿತಿ ಹಾಗೂ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಅವರಿಗೆ ಲಿಖಿತ ದೂರು ಸಲ್ಲಿಸಿದರು.

ಠಾಣಾಧಿಕಾರಿ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ತಪ್ಪಿದ್ದಲ್ಲಿ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.