ಬಿಎಸ್ ವೈ ಮೇಲೆ ದೂರು ರಾಜಕೀಯ ದುರುದ್ದೇಶ: ಸಿ.ಟಿ.ರವಿ ಆರೋಪ

| Published : Jun 14 2024, 01:05 AM IST

ಬಿಎಸ್ ವೈ ಮೇಲೆ ದೂರು ರಾಜಕೀಯ ದುರುದ್ದೇಶ: ಸಿ.ಟಿ.ರವಿ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನೀಡಿರುವ ದೂರ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನೀಡಿರುವ ದೂರ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.ಗುರುವಾರ ಪಟ್ಟಣದ ಅರಮನೆ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದವರು ಹತಾಶೆಯಿಂದ ಸೇಡಿನ ರಾಜಕೀಯಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದೂರು ಕೊಟ್ಟಿದ್ದಾರೆ. ಅವರನ್ನು ಬಂಧಿಸಲು ಸಂಚು ನಡೆಸುತ್ತಿದ್ದಾರೆ. ಮೂರು ತಿಂಗಳಿನ ನಂತರ ಈ ಕ್ರಮ ಏಕೆ, ಇಲ್ಲಿಯವರೆಗೆ ಮೌನವಾಗಿದ್ದುದು ಏಕೆ ಎಂದು ಪ್ರಶ್ನಿಸಿದ್ದಾರೆ.ಬಿ.ಎಸ್.ಯಡಿಯೂರಪ್ಪ ಅವರು 4 ಬಾರಿ ಮುಖ್ಯಮಂತ್ರಿಗಳಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಐದು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ಬಿಎಸ್ ವೈ ಹೋರಾಟಗಾರರು. ಇದು ರಾಜಕೀಯ ದುರುದ್ದೇಶ, ಅತಿರೇಕದ ಈ ಕ್ರಮ ನಿಮಗೇ ತಿರುಗು ಬಾಣವಾಗುತ್ತದೆ ಎಂದು ಹೇಳಿದರು.

ಮಾಜಿ ಶಾಸಕ ಎಸ್.ಎಂ.ನಾಗರಾಜ್, ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ನರೇಂದ್ರ ಭಾಗವಹಿಸಿದ್ದರು.

ಫೋಟೋ ಇದೆಃ 13ಕೆಟಿಆರ್.ಕೆ.8_

ತರೀಕೆರೆಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿದರು. ಮಾಜಿ ಶಾಸಕ ಎಸ್.ಎಂ.ನಾಗರಾಜ್,ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ನರೇಂದ್ರ ಇದ್ದರು.