ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು

| Published : Oct 21 2025, 01:00 AM IST

ಸಾರಾಂಶ

ಬೆಳಗಾವಿ ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅವರು ನಾಯಕ ಜನಾಂಗವನ್ನು ಅವಾಚ್ಯವಾಗಿ ನಿಂದಿಸಿದ್ದಾರೆ

ಕನಕಗಿರಿ: ವಾಲ್ಮೀಕಿ ನಾಯಕ ಸಮಾಜಕ್ಕೆ ಜಾತಿ ನಿಂದನೆ ಮಾಡಿದ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಟಿವಿ ಚಾನಲ್‌ವೊಂದರಲ್ಲಿ ಪ್ರಸಾರಗೊಂಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಪೋಸ್ಟ್ ಆಗಿರುವ ವಿಡಿಯೋ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಇದ್ಲಾಪುರ ಮೊಬೈಲ್‌ಗೆ ಬಂದಿದೆ. ಈ ವಿಡಿಯೋವನ್ನು ವೀಕ್ಷಿಸಿದ ನಾಗರಾಜ ಅವರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮಾಜಿ ಸಂಸದ ಹಾಗೂ ಬೆಳಗಾವಿ ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅವರು ನಾಯಕ ಜನಾಂಗವನ್ನು ಅವಾಚ್ಯವಾಗಿ ನಿಂದಿದ್ದು, ಕೂಡಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಕತ್ತಿ ಅವರು ವಾಲ್ಮೀಕಿ ಜನಾಂಗದ ಕುರಿತು ಕೀಳಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲವಾದರೆ, ಕೆಲವೇ ದಿನಗಳಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಹಾಸಭಾದ ಗೌರವಾಧ್ಯಕ್ಷ ಮುದಿಯಪ್ಪ ನಾಯಕ ಮಲ್ಲಿಗೆವಾಡ ಆಗ್ರಹಿಸಿದ್ದಾರೆ.