ಸ್ವಾಮೀಜಿಗೆ ಬೆದರಿಕೆ ಹಾಕಿದ್ದ ಶಿವರಾಮು ವಿರುದ್ಧ ದೂರು

| Published : Dec 17 2024, 12:46 AM IST

ಸ್ವಾಮೀಜಿಗೆ ಬೆದರಿಕೆ ಹಾಕಿದ್ದ ಶಿವರಾಮು ವಿರುದ್ಧ ದೂರು
Share this Article
  • FB
  • TW
  • Linkdin
  • Email

ಸಾರಾಂಶ

ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕೈ ಕತ್ತರಿಸುವೆ ಅಂತೆಲ್ಲಾ ನಿಂದನಾತ್ಮಕ ಹೇಳಿಕೆ ನೀಡಿದ್ದ ಹಿಂದುಳಿದ ವರ್ಗದ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ವಿ. ಅಶೋಕ ಗೋಪನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲು: ಅಭಾಲಿಂಪಂಮ ಜಿಲ್ಲಾಧ್ಯಕ್ಷ

- - -

- ಸಮಾಜಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೋರುವಂತೆ ಅಶೋಕ್‌ ಗೋಪನಾಳು ಒತ್ತಾಯ

- ಹೋರಾಟ ಹತ್ತಿಕ್ಕಲು ಕಾಂಗ್ರೆಸ್‌ ಸರ್ಕಾರ ಲಾಠಿ ಚಾರ್ಜ್ ಮಾಡಿದೆ ಎಂದು ಆಕ್ರೋಶ- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಕೈ ಕತ್ತರಿಸುವೆ ಅಂತೆಲ್ಲಾ ನಿಂದನಾತ್ಮಕ ಹೇಳಿಕೆ ನೀಡಿದ್ದ ಹಿಂದುಳಿದ ವರ್ಗದ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ವಿ. ಅಶೋಕ ಗೋಪನಾಳ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಎಂಬ ವ್ಯಕ್ತಿ ಡಿ.14ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ನೀಡಿದ್ದೇವೆ ಎಂದರು.

ಪಂಚಮಸಾಲಿಗೆ 2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಮುಖ್ಯಮಂತ್ರಿಗೆ ಮನವಿ ಅರ್ಪಿಸಲು ಹೋಗುವಾಗ ದುರುದ್ದೇಶದಿಂದ ಲಾಠಿ ಚಾರ್ಜ್ ಮಾಡಿಸಲಾಗಿದೆ. ಇದಕ್ಕೆ ಪುಷ್ಠಿಯಾಗಿ ಹಿಂದುಳಿದ ವರ್ಗದ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ಮೈಸೂರಿನಲ್ಲಿ ಶ್ರೀಗಳ ವಿರುದ್ಧ ನಿಂದನಾತ್ಮಕ ಮಾತುಗಳಾಡಿದ್ದಾರೆ ಎಂದ ಕಿಡಿಕಾರಿದರು.

ಸ್ವಾಮೀಜಿ ಕೈ ಕತ್ತರಿಸುತ್ತೇನೆ, ಆತ ಸ್ವಾಮಿಯೇ ಅಲ್ಲ, ಬಿಜೆಪಿ ಏಜೆಂಟರಂತೆ ವರ್ತಿಸುವ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ ಅವರಿಗೆ ಮುಗಿಸುವ ಸುಫಾರಿ ಪಡೆದಿದ್ದಾರೆ, ಮಠ ತ್ಯಜಿಸಬೇಕು, ಪುಡಾರಿಯಂತೆ ಸ್ವಾಮೀಜಿ ವರ್ತಿಸುತ್ತಿದ್ದಾರೆ. ಸ್ವಾಮೀಜಿಯಾಗಲು ನಾಲಾಯಕ್‌, ಕಾವಿ ಬಟ್ಟೆ ಬಿಚ್ಚಿಟ್ಟು ಬನ್ನಿ, ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದೀರಿ ಅಂತೆಲ್ಲಾ ಅವಾಚ್ಯ ಶಬ್ಧಗಳಿಂದ ತೇಜೋವಧೆ ಮಾಡಿದ್ದಾರೆ. ಆ ಮೂಲಕ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.

ಸಮಾಜದ ವಕೀಲರ ಘಟಕದ ಜಿಲ್ಲಾಧ್ಯಕ್ಷ ಎಚ್.ಎಸ್. ಯೋಗೇಶ, ಅಭಿ ಕಾಟನ್ಸ್ ಮಾಲೀಕ ಬಕ್ಕೇಶ ನ್ಯಾಮತಿ, ಗಿರೀಶ ಮರಡಿ, ವಿನಯಕುಮಾರ, ಕೊಟ್ರೇಗೌಡ, ಶಂಕರ್ ಇತರರು ಇದ್ದರು.

- - -

ಟಾಪ್‌ ಕೋಟ್‌

ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷನಾಗಿ ಶಿವರಾಮು ಅದೇ ವರ್ಗಗಳಿಗೆ ಮೀಸಲಿಟ್ಟಿದ್ದ ಅನುದಾನವನ್ನು ಬಿಟ್ಟಿ ಗ್ಯಾರಂಟಿಗೆ ಬಳಸಿದ್ದು ಯಾಕೆಂದು ಸಿಎಂ ಸಿದ್ದರಾಮಯ್ಯರಿಗೆ ಪ್ರಶ್ನಿಸಲಿ. ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಬಳಿ ಕೆ.ಎಸ್.ಶಿವರಾಮು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯವಾಪಿ ಹೋರಾಟ ಸಹ ಮಾಡುತ್ತೇವೆ

- ಅಶೋಕ ಗೋಪನಾಳ್‌, ಜಿಲ್ಲಾಧ್ಯಕ್ಷ

- - - -16ಕೆಡಿವಿಜಿ2:

ದಾವಣಗೆರೆಯಲ್ಲಿ ಸೋಮವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ವಿ.ಅಶೋಕ ಗೋಪನಾಳ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.