ಸಾರಾಂಶ
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೊಪ್ಪಳ ಎಸ್ಪಿಗೆ ಬುಧವಾರ ದೂರು ಸಲ್ಲಿಸಲಾಯಿತು.
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ದೂರು ಸಲ್ಲಿಕೆಕನ್ನಡಪ್ರಭ ವಾರ್ತೆ ಕೊಪ್ಪಳ
ವಿಜಯಪುರದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಸಿ.ಟಿ. ರವಿ ನಮೋ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮತ್ತು ಅವರ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಲ್ಲದೆ ಸಾರ್ವಜನಿಕರಿಗೆ ಗೊಂದಲ ಸೃಷ್ಟಿಸಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೊಪ್ಪಳ ಎಸ್ಪಿಗೆ ಬುಧವಾರ ದೂರು ಸಲ್ಲಿಸಲಾಯಿತು.ಶಾಸಕ ಬಸನಗೌಡ ಪಾಟೀಲ ಯತ್ನಾಳ ಪದೇ ಪದೇ ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಗೊಂದಲ ಸೃಷ್ಟಿ ಮಾಡುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಅದೇ ರೀತಿ ಮಾಜಿ ಸಚಿವ ಸಿ.ಟಿ. ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ಕೂಡ ವಕ್ಫ್ ಸಂಸ್ಥೆಗಳ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ರಾಜ್ಯದಲ್ಲಿ ನೆಮ್ಮದಿಯಿಂದ ಇರುವ ಅಮಾಯಕ ಜನರಲ್ಲಿ ಕೋಮು ದ್ವೇಷ ಮೂಡಿಸುವಂತಹ ಹುನ್ನಾರ ನಡೆಸಿದ್ದಾರೆ. ಇಂತಹ ಸಮಾಜ ವಿರೋಧಿ ಕೋಮುವಾದಿ ಮುಖಂಡರ ವಿರುದ್ಧ ಕ್ರಮ ಜರುಗಿಸಬೇಕು, ಅವರನ್ನು ಬಂಧಿಸಬೇಕು, ಅವರ ಮೇಲೆ ಪ್ರಕರಣ ದಾಖಲಿಸಬೇಕೆಂದು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಸೈಯದ್ ಖಾಜಾ ಮೈನುದ್ದೀನ್ ಮುಲ್ಲಾ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಹಿರಿಯ ನಾಯಕ ಕೆ.ಎಂ. ಸೈಯದ್, ಬಾಶುಸಾಬ್ ಕತಿಬ್, ತಾಜುದ್ದೀನ್ ದಳಪತಿ, ಸುಲೇಮಾನ್ ಚಡಚಣ, ಗೌಸ್ ಮೋಹಿದ್ದೀನ್ ವಠಾರ, ಖಾಸಿಂಸಾಬ್ ಕೈಗಡ್ಡಿ, ಉಸ್ಮಾನ್ ಸಾಬ್ ಕಲಬುರ್ಗಿ, ಚೌಕತ್ ಕೈಗಡಿ, ಹುಸೇನ್ ಕೈಗಡ್ಡಿ, ಸದಾಂ ಹುಸೇನ್, ಅಮರಾವತಿ ಜಾನ್ ಸಾಬ್, ಮುಲ್ಲಾ ಸೈಯದ್, ಫಿರೋಜ್ ಎಂ.ಡಿ. ಜಹೀರ್ ಅಲಿ, ಇಕ್ಬಾಲ್ ಸಿದ್ದಿಕಿ, ಬಾಬಾ ಅರಗಂಜಿ, ಬಶೀರ್ ಅಹ್ಮದ್ ಅತ್ತಾರ್ ಪಾಲ್ಗೊಂಡಿದ್ದರು.