ಸಾರಾಂಶ
ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಕೊಂಗಂಡಿ ಗ್ರಾಮದಲ್ಲಿ ಇರುವ ಸರ್ಕಾರಿ ಜಮೀನು ಸರ್ವೇ ನಂ: 12/6 ರ 3 ಗುಂಟೆ ಜಾಗೆಯಲ್ಲಿರುವ ಸರ್ಕಾರಿ ಬಾವಿ ಮುಚ್ಚಿ, ಜಮೀನು ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಯಾದಗಿರಿ: ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಕೊಂಗಂಡಿ ಗ್ರಾಮದಲ್ಲಿ ಇರುವ ಸರ್ಕಾರಿ ಜಮೀನು ಸರ್ವೇ ನಂ: 12/6 ರ 3 ಗುಂಟೆ ಜಾಗೆಯಲ್ಲಿರುವ ಸರ್ಕಾರಿ ಬಾವಿ ಮುಚ್ಚಿ, ಜಮೀನು ಮಾರಾಟ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಈಗಾಗಲೇ ಬಾವಿ ಮುಚ್ಚಿ 15 ದಿನಗಳಾದರೂ ಗೋನಾಳ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಕೂಡಲೇ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು, ಇಲ್ಲವಾದಲ್ಲಿ ವಡಗೇರಾ ಪೊಲೀಸ್ ಠಾಣೆ ಎದುರಿಗೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕುರಕುಂದಿ, ಮಲ್ಲಿಕಾರ್ಜುನ ಶಾಖನವರ, ಮಹಾದೇವಪ್ಪ ಬಿಜಾಸಪುರ, ಬಸವರಾಜ ಗೋನಾಲ ಇನ್ನಿತರರು ಇದ್ದರು.