ಇಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

| Published : Feb 09 2024, 01:49 AM IST / Updated: Feb 09 2024, 03:20 PM IST

ಸಾರಾಂಶ

ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಮಡಿಕೇರಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಮಡಿಕೇರಿ: ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಮಡಿಕೇರಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆ.14ರಂದು ಸೋಮವಾರಪೇಟೆ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆ ವರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. 

ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. 

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಗ್ರಾಮ ಒನ್ ಕೇಂದ್ರ: ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯಿತಿಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿಯಲ್ಲಿ ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಫೆ.15ರ ವರೆಗೆ ಅವಕಾಶ ಕಲ್ಪಿಸಲಾಗಿದೆ. 

ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9148712473, ಇ-ಮೇಲ್ ಐಡಿ care@blsinternational.net ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/ 9900385301 ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.