ಕನ್ನಡಪ್ರಭ ವಾರ್ತೆ ಮಹಾಲಿಂಗಪುರಹಿಂದೂ ಧರ್ಮದ ಆರಾಧ್ಯ ದೈವ ಶ್ರೀರಾಮಚಂದ್ರ ಮತ್ತು ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಮಹಾಲಿಂಗಪುರ : ಹಿಂದೂ ಧರ್ಮದ ಆರಾಧ್ಯ ದೈವ ಶ್ರೀರಾಮಚಂದ್ರ ಮತ್ತು ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯಕರ್ತರು ಗುರುವಾರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಶ್ರೀರಾಮನ ಜನನ ಹಾಗೂ ಹಿಂದೂ ದೇವರುಗಳ ಕುರಿತು ಅಶ್ಲೀಲ ಭಾಷೆ
ಜೂ.9, 2026 ರಂದು ಹರಿಹರದ ಬಿ.ಕೃಷ್ಣಪ್ಪ ಮೈತ್ರಿವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪ್ರೊ.ಕೆ.ಎಸ್.ಭಗವಾನ್, ಶ್ರೀರಾಮನ ಜನನ ಹಾಗೂ ಹಿಂದೂ ದೇವರುಗಳ ಕುರಿತು ಅಶ್ಲೀಲ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹೇಳಿಕೆಗಳು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ಉಂಟು ಮಾಡಿವೆ. ಈ ಹಿಂದೆಯೂ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಭಗವಾನ್ ಅವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಮಹಾಲಿಂಗಪುರ ಪೊಲೀಸ್ ಠಾಣಾಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರಾದ ರಾಘವೇಂದ್ರ ಪವಾರ, ರಾಘು ಗರಗಟಗಿ, ಭರತ ಕದ್ದಿಮನಿ, ರಾಘು ಕಪರಟ್ಟಿ, ದಾನೇಶ ಡೊಂಬರ, ಸುದೀಪ ಮೇಟಿ, ವಿನೋದ ಮೇತ್ರಿ , ರಾಘು ಡಂಬಳ, ವಿಕ್ರಂ ಮೇಟಿ ಸೇರಿದಂತೆ ಇತರರಿದ್ದರು.