ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅವಾಚ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ನಿಂದ ಎಸ್ಪಿ ಬಿ. ನಿಖಿಲ್ ಅವರಿಗೆ ದೂರು ಸಲ್ಲಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ, ಡಿಸಿಎಂ, ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ಧ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ಧಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.ರಾಜ್ಯದ ಸಿಎಂ ಮತ್ತು ಡಿಸಿಎಂ ವಿರುದ್ಧವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿ ಪ್ರದರ್ಶನ ಮಾಡಿದ್ದಾರೆ. ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು, ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು. ಈ ನಿಟ್ಟಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ.ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಇದ್ದರು.