ಈ ನಕಲಿ ದಾಖಲೆಗಳನ್ನು 2018- 19 ರಲ್ಲಿ ಸೃಷ್ಟಿಸಲಾಗಿದೆ. ಈ ದಾಖಲೆಗಳಲ್ಲಿ 1995ನೇ ಇಸವಿಯಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೋಟ್ಯಂತರ ರು. ಬೆಲೆಬಾಳುವ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಬೇಕೆಂದು ಹಲವಾರು ಮಂದಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾಲೂಕಿನ ಹಲವು ಗ್ರಾಮಗಳಲ್ಲಿ ಕೋಟ್ಯಂತರ ರುಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ, ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.ಗುರುವಾರ ಬೆಳ್ಳಂಬೆಳಗ್ಗೆಯೇ ತಾಲೂಕು ಕಚೇರಿಗೆ ಎರಡ್ಮೂರು ವಾಹನಗಳಲ್ಲಿ ಬಂದಿಳಿದ ಲೋಕಾಯುಕ್ತ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿರುವ ಕುರಿತು ತಾಲೂಕು ಕಚೇರಿಯ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸಂಬಂಧಿಸಿದ ಭೂಮಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ತಾಲೂಕಿನ ನರಿಗೇಹಳ್ಳಿ, ಲೆಂಕನಹಳ್ಳಿ, ದೇವನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿದ್ದ ಸರ್ಕಾರಿ ಭೂಮಿಯನ್ನು ಕೆಲವು ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಹಲವರು ಲಕ್ಷಾಂತರ ರು. ಹಣ ಪಡೆದು ಬೇರೆಯವರಿಗೆ ಪರಭಾರೆ ಮಾಡಿದ್ದಾರೆಂದು ದೂರಲಾಗಿತ್ತು.ಈ ನಕಲಿ ದಾಖಲೆಗಳನ್ನು 2018- 19 ರಲ್ಲಿ ಸೃಷ್ಟಿಸಲಾಗಿದೆ. ಈ ದಾಖಲೆಗಳಲ್ಲಿ 1995ನೇ ಇಸವಿಯಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೋಟ್ಯಂತರ ರು. ಬೆಲೆಬಾಳುವ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಬೇಕೆಂದು ಹಲವಾರು ಮಂದಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ತಾಲೂಕಿನಲ್ಲಿ ನಡೆದಿರುವ ಭೂ ಹಗರಣದ ಕುರಿತು ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿನ ಸಂಖ್ಯೆ 12/25 ರ ಪ್ರಕರಣದಲ್ಲಿ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾ ಲೋಕಾಯುಕ್ತಕ್ಕೆ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಲೋಕಾಯುಕ್ತ ಎಸ್ಪಿ ಎ.ವಿ. ಲಕ್ಷ್ಮೀನಾರಾಯಣ್ ರವರ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಸಲೀಂ ಅಹಮದ್ ಮತ್ತು ಸಬ್ ಇನ್ಸ್ ಪೆಕ್ಟರ್ ಟಿ.ರಾಜು ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ತಹಸೀಲ್ದಾರ್ ಆಗಿದ್ದ ನಾಗರಾಜ್, ಸಿಬ್ಬಂದಿ ಕಲ್ಲೇಶ್ ಮತ್ತು ತಿಪಟೂರು ಉಪವಿಭಾಗಾಧಿಕಾರಿಗಳ ಕಚೇರಿಯ ಕೆಲ ಸಿಬ್ಬಂದಿ ಮತ್ತು ತುರುವೇಕೆರೆಯ ಕೆಲವು ಸಿಬ್ಬಂದಿಯನ್ನೂ ಸಹ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.