ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಕೆ.ಆರ್.ಎಸ್. ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದಿರುವ ಬಡ ಕೂಲಿ ಕಾರ್ಮಿಕರಿಗೆ ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐನ ನಿಯಮಾವಳಿಗಳನ್ನು ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗುಳೆ ಹೋಗುವಂತೆ ಮಾಡುತ್ತಿವೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಮೈಕ್ರೋ ಫೈನಾನ್ಸ್‌ಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಕೆ.ಆರ್.ಎಸ್. ಪಕ್ಷದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದಿರುವ ಬಡ ಕೂಲಿ ಕಾರ್ಮಿಕರಿಗೆ ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐನ ನಿಯಮಾವಳಿಗಳನ್ನು ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗೂಳೆ ಹೋಗುವಂತೆ ಮಾಡುತ್ತಿವೆ. ಅದು ಅಲ್ಲದೆ ಮೈಕ್ರೋ ಫೈನಾನ್ಸ್‌ಗಳ ವಸೂಲಿಗಾರರ ಕಿರುಕುಳದಿಂದಾಗಿ ಬಹುತೇಕ ಬಡ ಹೆಣ್ಣು ಮಕ್ಕಳು, ರೈತಾಪಿ ವರ್ಗ, ಕಾರ್ಮಿಕರು ಆತ್ಮಹತ್ಯೆಗೆ ಮುಂದಾಗುತ್ತಿರುವುದು ತೀವ್ರ ಕಳವಳಕಾರಿಯಾದ ವಿಷಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್ ಬ್ಯಾಂಕ್‌ಗಳ ಸಿಬ್ಬಂದಿ ಒಡ್ಡುವ ದಬ್ಬಾಳಿಕೆ, ಜೀವ ಬೆದರಿಕೆ, ಮನೆ ಜಪ್ತಿ ಮಾರಾಟ ಮಾಡುವುದು ಸಾರ್ವಜನಿಕವಾಗಿ ನಿಂದಿಸುವ ಮತ್ತು ಮಾನಹಾನಿ ಮಾಡಿ ಆತ್ಮಹತ್ಯೆಗೆ ಪ್ರಚೋದಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದಾಗಿ ಇಂತಹ ಫೈನಾನ್ಸ್ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಿ ರದ್ದುಗೊಳಿಸಿ ಜಿಲ್ಲೆಯ ಜನತೆಯ ರಕ್ಷಣೆಗೆ ಸೂಕ್ತ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ವಿಕ್ರಮ ವಾಘಮೋರೆ, ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಮುಂತಾದವರು ಇದ್ದರು.