ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎಸ್‌ಎ-ಸಿ ಮತ್ತು ಮಹಾತ್ಮ ಗಾಂಧಿ ನಗರೋತ್ಥಾನ ಅಡಿಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಅಥವಾ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತುರ್ತಾಗಿ ಪರಿಶೀಲಿಸಿ, ಗಡುವಿನೊಳಗೆ ಪೂರ್ಣಗೊಳಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಾಕೀತು ಮಾಡಿದರು.ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಾಮಗಾರಿಗಳ ಗುಣಮಟ್ಟ ಮತ್ತು ಕಾಲಮಿತಿಯನ್ನು ಖಚಿತಪಡಿಸಲು ಅಧಿಕಾರಿಗಳು ಮತ್ತು ಟೆಂಡರ್‌ದಾರರ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಜೊತೆಗೆ ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಗಳ ಟೆಂಡರ್‌ಗಳಿಗೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸಬೇಕು ಎಂದು ಸೂಚನೆ ನೀಡಿದರು.
ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಲು ನಿರ್ದೇಶಿಸಲಾಯಿತು. ಪ್ರತಿದಿನ ಸಂಜೆ 6 ಗಂಟೆಯ ನಂತರ ವಿದ್ಯುತ್ ಅಧಿಕಾರಿಗಳು ಕಡ್ಡಾಯವಾಗಿ ಸ್ವತಃ ಪರಿಶೀಲನೆ ನಡೆಸಿ, ವರದಿ ಸಲ್ಲಿಸಬೇಕು ಎಂದರು.ಸಾರ್ವಜನಿಕರಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡಬೇಕು. ಡಿಸೆಂಬರ್ ತಿಂಗಳಿನಲ್ಲಿ ‘ಶೂನ್ಯ ಗುಂಡಿ’ ಅಭಿಯಾನದ ಅಡಿಯಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಬೇಕು. ಪ್ರತೀ ಪಾಲಿಕೆ ಎಂಜಿನಿಯರ್ ತಮ್ಮ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಅಗತ್ಯವಿರುವ ಕಡೆಗಳಲ್ಲಿ ರಸ್ತೆ ದುರಸ್ತಿ ಮತ್ತು ವೈಜ್ಞಾನಿಕವಾಗಿ ಹಂಪ್ಸ್‌ಗಳನ್ನು ನಿರ್ಮಿಸುವ ಕುರಿತು ಹಾಗೂ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿರುವ ಸಿಗ್ನಲ್ ಪಾಯಿಂಟ್‌ಗಳ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ನೆಹರು ರಸ್ತೆಯ ಕನ್ಸರ್ವೆನ್ಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಿ ದ್ವಿಚಕ್ರ ವಾಹನಗಳ ನಿಲುಗಡೆಗೆ (ಪಾರ್ಕಿಂಗ್) ಅವಕಾಶ ಮಾಡಿಕೊಡುವುದು ಮತ್ತು ಸಾರ್ವಜನಿಕ ಶೌಚಾಲಯಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.ನಗರದ ಸೌಂದರ್ಯ ಮತ್ತು ಸ್ಮಾರಕಗಳ ರಕ್ಷಣೆ ಮಹಾತ್ಮ ಗಾಂಧಿ ಪಾರ್ಕ್: ನಗರದ ಹೆಮ್ಮೆಯ ಮಹಾತ್ಮ ಗಾಂಧಿ ಪಾರ್ಕ್‌ನ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಕುರಿತು ವರದಿ ಸಲ್ಲಿಸಲು ಸೂಚಿಸಲಾಯಿತು. ವಿಶೇಷವಾಗಿ, ಪಾರ್ಕ್‌ನಲ್ಲಿರುವ ರೈಲು ಕಾರ್ಯಾಚರಣೆಯ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಪಾಲಿಕೆ ಅಧಿಕಾರಿಗಳಿದ್ದರು.;Resize=(128,128))
;Resize=(128,128))
;Resize=(128,128))