11ರಂದು ಸಂಪೂರ್ಣ ಶ್ರೀ ದೇವಿಮಹಾತ್ಮೆ ಯಕ್ಷಗಾನ ಪ್ರದರ್ಶನ

| Published : Nov 09 2025, 01:45 AM IST

ಸಾರಾಂಶ

ಕೊಡಚಾದ್ರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನ.11 ರಂದು ಮಂಗಳವಾರ ಸಂಜೆ 6 ಗಂಟೆಗೆ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ಪಾವಂಜೆ ಮೇಳದವರಿಂದ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕೊಡಚಾದ್ರಿ ಟ್ರಸ್ಟಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ತೀರ್ಥಹಳ್ಳಿ: ಕೊಡಚಾದ್ರಿ ಸಾಂಸ್ಕೃತಿಕ ವೇದಿಕೆ ವತಿಯಿಂದ ನ.11 ರಂದು ಮಂಗಳವಾರ ಸಂಜೆ 6 ಗಂಟೆಗೆ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಕ್ರೀಡಾಂಗಣದಲ್ಲಿ ಪಾವಂಜೆ ಮೇಳದವರಿಂದ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕೊಡಚಾದ್ರಿ ಟ್ರಸ್ಟಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.

ಜಿಲ್ಲೆಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕೊಡಚಾದ್ರಿ ಟ್ರಸ್ಟ್‌ನ ಕಳೆದ 23 ವರ್ಷಗಳಿಂದ ಸಾಂಸ್ಕೃತಿಕ ವೇದಿಕೆ ವತಿಯಿಂದ ಇಂಥ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ತೆಂಕು ತಿಟ್ಟಿನ ಖ್ಯಾತ ಪಾವಂಜೆ ಮೇಳದ ಯಕ್ಷಗಾನ ಪ್ರದರ್ಶನವನ್ನು ಪ್ರಮುಖ ಹೋಬಳಿ ಕೇಂದ್ರವಾದ ಕೋಣಂದೂರಿನಲ್ಲಿ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊಡಚಾದ್ರಿ ಟ್ರಸ್ಟ್ ವತಿಯಿಂದ ಜಿಲ್ಲೆಯಲ್ಲಿ 12600 ಸ್ವ-ಸಹಾಯ ಗುಂಪುಗಳನ್ನು ರಚಿಸಲಾಗಿದ್ದು, ಕೃಷಿಕರಿಗೆ ಉಪ ಕಸುಬಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳಿಗೆ ವಿವಿಧ ಬ್ಯಾಂಕುಗಳಿಂದ 180 ಕೋಟಿ ಅನುದಾನವನ್ನು ಕೊಡಿಸುವ ಮೂಲಕ ಉಪ್ಪಿನಕಾಯಿ ಸೇರಿದಂತೆ ಆಹಾರ ಉತ್ಪಾದನೆ, ಕುರಿಕೋಳಿ ಸಾಕಣೆ, ಉಡುಪುಗಳ ಸಿದ್ದತೆ ಹೀಗೆ ಸ್ವಯಂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ದೊಡ್ಡ ಮಟ್ಟದ ಕೊಡಚಾದ್ರಿ ಉತ್ಸವ ನಡೆಸುವ ಮೂಲಕ ಮಾರುಕಟ್ಟೆ ವ್ಯವಸ್ಥೆಗೂ ಆದ್ಯತೆ ನೀಡಲಾಗಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಜಿ.ಎಸ್.ನಾರಾಯಣ ರಾವ್, ಶಿಮುಲ್ ಅಧ್ಯಕ್ಷ ವಿಧ್ಯಾಧರ, ಟಿ.ಎಲ್.ಸುಂದರೇಶ್, ಕೊಲ್ಲೂರಯ್ಯ, ಸುರೇಶ್ ಕೋಣಂದೂರು, ಅಜಿತ್, ರಾಘವೇಂದ್ರ ಶೆಟ್ಟಿ ಬಿ.ಆರ್., ಮಧುಸೂದನ ನಾವಡ ಇದ್ದರು.