ಸಾರಾಂಶ
ಮಸ್ಕಿಯಲ್ಲಿ 2.5 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವಗೌಡ ತುರ್ವಿಹಾಳ ಚಾಲನೆ ನೀಡಿದರು.
ಮಸ್ಕಿ: ಸರ್ಕಾರದಿಂದ ಬರುವ ಅನುಧಾನವನ್ನು ಸದುಪಯೋಗ ಪಡಿಸಿಕೊಂಡು ಜೆಜೆಎಂ ಕಾಮಗಾರಿ ನಡೆಸಲಾಗುತ್ತಿದ್ದು ಗುತ್ತಿಗೆದಾರರು ನಿಗದಿತ ಅವದಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಮನೆ-ಮನೆಗೆ ನೀರು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಗರಬೆಂಚಿ, ಮ್ಯಾದರಾಳ್, ಮಲದಗುಡ್ಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 2 ಕೋಟಿ 50 ಲಕ್ಷ ವೆಚ್ಚದ ದೇವಸ್ಥಾನ ಅಭಿವೃದ್ಧಿ ಹಾಗೂ ಜೆಜೆಎಂ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ಕಾರ ಇರುವುದೇ ಅಭಿವೃದ್ಧಿ ಪರ. ಆದ್ದರಿಂದ ಕ್ಷೇತ್ರದಲ್ಲಿ ಜನರಿಗೆ ಮುಖ್ಯವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು. ಜೆಜೆಎಂ ಯೋಜನೆಯಿಂದ ಪ್ರತಿಯೊಂದು ಮನೆಗೆ ನೀರು ದೊರೆಯುತ್ತದೆ. ಇದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು. ಗುತ್ತಿಗೆ ಪಡೆದ ಗುತ್ತಿಗೆದಾರರು ಸೂಕ್ತ ಗುಣಮಟ್ಟದಿಂದ ಕಾಮಗಾರಿಯನ್ನು ನಿಗದಿತ ಸಮಯದೊಳಗಡೆ ಮಾಡಬೇಕು ಇದರಿಂದ ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಸಾದ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಿದ್ದನಗೌಡ ನಾಗರಬೆಂಚಿ, ಕರಿಯಪ್ಪ ಬೆಂಗಳೂರು, ಬಸ್ಸಪ್ಪ ಜಂಗಮರಳ್ಳಿ, ಬಲವಂತರಾಯ ವಟಗಲ್,ಮಲ್ಲಯ್ಯ ಮಲ್ಲದಗುಡ್ಡ, ಮಂಜುನಾಥಸ್ವಾಮಿ ಸೇರಿದಂತೆ ಇತರರು ಇದ್ದರು.