ಚಿಕ್ಕಮಗಳೂರುಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ಸುಮಾರು ₹1,281.80 ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಮೂರನೇ ಹಂತದ ಕಾಮಗಾರಿ ಶೀಘ್ರ ಪೂರ್ಣಗೊಳಿ ಸುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚಿಸಿದರು.
ಸಿ.ಟಿ,ರವಿ ಸೂಚನೆ । ಕೆರೆ ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿ ಗಳೊಂದಿಗೆ ಚರ್ಚೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ಸುಮಾರು ₹1,281.80 ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಮೂರನೇ ಹಂತದ ಕಾಮಗಾರಿ ಶೀಘ್ರ ಪೂರ್ಣಗೊಳಿ ಸುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ, ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಬಳಿಕ ಮಾತನಾಡಿದರು.ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗದ 245 ಕೆರೆಗಳಿಗೆ ಭದ್ರಾ ಉಪ ಜಲಾನಯನ ಪ್ರದೇಶದಿಂದ ನೀರು ತುಂಬಿಸುವ ₹1,281.80 ಕೋಟಿ ಅಂದಾಜು ವೆಚ್ಚದ ಯೋಜನೆ ಇದಾಗಿದೆ. ಯೋಜನೆ ಮೊದಲ ಹಾಗೂ ಎರಡನೇ ಹಂತದ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಪ್ರಸ್ತುತ 3ನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಮೂರನೇ ಹಂತದ ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿದ ಅವರು, ಕಾಮಗಾರಿ ಪ್ರಗತಿ ಹಾಗೂ ಬಾಕಿ ಇರುವ ಕೆಲಸಗಳ ಬಗ್ಗೆ ಮಾಹಿತಿ ಪಡೆದು, ಯೋಜನೆ ಶೀಘ್ರವಾಗಿ ಪೂರ್ಣ ಗೊಳಿಸುವಂತೆ ಸೂಚಿಸಿದರು.ಈ ನೀರಾವರಿ ಯೋಜನೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.ನಮ್ಮ ಭಾಗದ ರೈತರಿಗೆ ಸಹಕಾರಿಯಾಗುವ ಈ ಯೋಜನೆಯಡಿ ಪ್ರತಿಯೊಂದು ಕೆರೆಗೂ ನೀರು ತಲುಪಿ ಸುವುದು ಮತ್ತು ರೈತರ ಮೊಗದಲ್ಲಿ ಮಂದಹಾಸ ಮೂಡಿಸುವುದೇ ನಮ್ಮ ಪ್ರಮುಖ ಗುರಿ ಎಂದು ಹೇಳಿದರು.ಯೋಜನೆ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿದರೆ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಬಯಲುಸೀಮೆ ಭಾಗದ ರೈತರಿಗೆ ನೀರಿನ ಲಭ್ಯತೆ ಹೆಚ್ಚಾಗಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ನಮ್ಮ ಕನಸಿನ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಂಡು, 245 ಕೆರೆಗಳಿಗೂ ನೀರು ತಲುಪಬೇಕು. ಈ ಯೋಜನೆ ರೈತರ ಬದುಕಿನಲ್ಲಿ ಆಶಾಕಿರಣವಾಗಬೇಕು ಎಂದು ಹೇಳಿದರು.--ಫೋಟೋ ಭದ್ರಾ ಉಪ ಜಲಾನಯನ ಪ್ರದೇಶದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕುರಿತು ಅಧಿಕಾರಿಗಳೊಂದಿಗೆ ಡಾ.ಸಿ.ಟಿ.ರವಿ ಚರ್ಚಿಸಿದರು.