ಸಾರಾಂಶ
ಗಣತಿದಾರರು ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡಿದಾಗ ನಿವಾಸಿಗಳು ಸ್ಪಂದಿಸಬೇಕು
ಯಲಬುರ್ಗಾ: ಸಾಮಾಜಿ ಮತ್ತು ಶೈಕ್ಷಣಿಕ ಸಮೀಕ್ಷೆಯು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ಗಣತಿದಾರರಿಗೆ ತಾಪಂ ಇಒ ನೀಲಗಂಗಾ ಬಬಲಾದ ತಿಳಿಸಿದರು.
ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಭೇಟಿ ನೀಡಿ ಮಾತನಾಡಿದರು.ಗಣತಿದಾರರು ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡಿದಾಗ ನಿವಾಸಿಗಳು ಸ್ಪಂದಿಸಬೇಕು.ಸಮೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಸಾರ್ವಜನಿಕರೊಂದಿಗೆ ಅಗತ್ಯ ಮಾಹಿತಿ ಪಡೆದು ತಂತ್ರಾಂಶದಲ್ಲಿ ಅಳವಡಿಸಬೇಕು. ಇದು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದರು. ಈ ಸಂದರ್ಭ ಗ್ರಾಪಂ ಪಿಡಿಒ ರೇಣುಕಾ ಟಂಕದ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಹಾಗೂ ಗಣತಿದಾರರು ಸಿಬ್ಬಂದಿ ಇದ್ದರು.