ಸಾರಾಂಶ
ಅಪ್ಪರ ಭದ್ರ ನೀರಾವರಿ ಯೋಜನೆಯಲ್ಲಿ ಕೈ ಬಿಟ್ಟಿರುವ ಕೆರೆಗಳನ್ನು ಸೇರ್ಪಡೆ ಮಾಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ ಅಪ್ಪರ ಭದ್ರ ನೀರಾವರಿ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಿ, ಶಿರಾ ಭಾಗದ ಕೆರೆಗಳಿಗೆ ನೀರು ಕೊಡಿಸುವಂತಹ ಕೆಲಸವನ್ನು ಸರಕಾರ ಮಾಡಬೇಕಿದೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಹುಲಿಕುಂಟೆ ಹೋಬಳಿ ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಾದಲಡಕು ಸೇರಿದಂತೆ ಅಪ್ಪರ ಭದ್ರ ನೀರಾವರಿ ಯೋಜನೆಯಲ್ಲಿ ಕೈ ಬಿಟ್ಟಿರುವ ಕೆರೆಗಳನ್ನು ಸೇರ್ಪಡೆ ಮಾಡಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಅವರು ತಾಲೂಕಿನ ಹುಲಿಕುಂಟೆ ಹೋಬಳಿಯ ಯಾದಲಡಕು ಶ್ರೀರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಅಪರಭದ್ರ ನೀರಾವರಿ ಯೋಜನೆಗೆ ಮೀಸಲಿಟ್ಟಿರುವ ಹಣವನ್ನು ಕೇಂದ್ರ ಸರಕಾರ ತಕ್ಷಣ ಬಿಡುಗಡೆ ಮಾಡಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಒತ್ತಾಯಿಸಿದರು. ಸಾವಿರಾರು ಭಕ್ತರು ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀರಂಗನಾಥ ಸ್ವಾಮಿ ಆಶೀರ್ವಾದ ಪಡೆದರು. ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೈ.ಕೆ. ಜಯರಾಮಪ್ಪ, ಕಾರ್ಯದರ್ಶಿ ಪಾಂಡುರಂಗಪ್ಪ ,ಪ್ರಧಾನ ಅರ್ಚಕ ಪಿ. ಚಿದಾನಂದ್, ವಿ ಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ, ನಾದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್ ,ಮುಖಂಡರಾದ ಶಿವಣ್ಣ, ಬಿ.ಆರ್. ತಿಪ್ಪೇಸ್ವಾಮಿ, ಆರ್. ತಿಪ್ಪೆಸ್ವಾಮಿ, ಮಹೇಶ್, ಬಸವರಾಜು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೂಲೆಮನೆ ರಂಗನಾಥ್, ಚಂದ್ರಪ್ಪ, ಕೆ. ಪಾಂಡುರಂಗಪ್ಪ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.