ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ

| Published : Nov 21 2024, 01:02 AM IST

ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು.

ಹುಬ್ಬಳ್ಳಿ:

ಇಲ್ಲಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸುತ್ತಿರುವ ನಗರ ಮತ್ತು ಉಪನಗರ ಸಾರಿಗೆ ಬಸ್ ನಿಲ್ದಾಣದ (ಹಳೇ ಬಸ್ ನಿಲ್ದಾಣ) ಕಟ್ಟಡದ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಬುಧವಾರ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಬಸ್‌ ನಿಲ್ದಾಣ ಕಾಮಗಾರಿಯ ವೇಗ ಹೆಚ್ಚಿಸಬೇಕಿದ್ದು, ಡಿಸೆಂಬರ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರದಿಗೆ ಸೂಚಿಸಿದರು.

ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪ್ರಯಾಣಿಕರ ಭದ್ರತೆ ಸೇರಿದಂತೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬಸ್‌ ನಿಲ್ದಾಣದಲ್ಲಿ ಒಂದು ಭಾಗದಲ್ಲಿ ಆಟೋಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ವೇಳೆ ಸ್ಮಾರ್ಟ್‌ಸಿಟಿ ಎಂಡಿ ರುದ್ರೇಶ ಗಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಾದ ಶ್ರೀನಿವಾಸ, ವಿವೇಕಾನಂದ, ಸಿದ್ಧಲಿಂಗೇಶ ಹಾಗೂ ಇದ್ದರು.