ಜಾಲವಾಡಗಿ ಏತ ನೀರಾವರಿ ಯೋಜನೆಗೆ ಟೆಂಡರ್ ಕೊಟ್ಟಿದ್ದು, ಅದನ್ನೂ ಶೀಘ್ರ ಕೈಗೆತ್ತಿಕೊಳ್ಳುವಂತೆ ಒತ್ತಡ ಹೇರಲಾಗುವುದು. ಒಟ್ಟಾರೆ ಶಿರಹಟ್ಟಿ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರ ನಡೆಯಲಿದ್ದು, ಇದಕ್ಕೆ ಜನರ ಸಹಕಾರ ಅಗತ್ಯ.
ಮುಂಡರಗಿ: ಇದುವರೆಗೂ ಸ್ವಂತ ಕಟ್ಟಡ ಇಲ್ಲದಿರುವುದರಿಂದ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಕೇಂದ್ರ ಶಾಲೆಯಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ನಡೆಯುತ್ತಿದ್ದು, ಇದೀಗ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ನಿಗದಿತ ಸಮಯದೊಳಗೆ ಕಟ್ಟಡ ಪೂರ್ಣಗೊಂಡು ವಿದ್ಯಾರ್ಥಿಗಳ ತರಗತಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಹೆಸರೂರು ರಸ್ತೆ ಆಶ್ರಯ ಕಾಲನಿಯಲ್ಲಿ ₹4 ಕೋಟಿ ವೆಚ್ಚದ ಅಲ್ಪಸಂಖ್ಯಾತರ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಈ ಹಿಂದೆ ಮೌಲಾನಾ ಆಜಾದ್ ಶಾಲೆ ನಡೆಯಲು ಅನೇಕ ತೊಂದರೆಗಳನ್ನು ಎದುರಿಸಬೇಕಾಯಿತು. ಶಿರಹಟ್ಟಿ ಮತ್ತು ಮುಂಡರಗಿಯಲ್ಲಿ ತಲಾ ₹4 ಕೋಟಿ ವೆಚ್ಚದ ಮೌಲಾನಾ ಆಜಾದ್ ಶಾಲಾ ಕಟ್ಟಡಗಳು ನಿರ್ಮಾಣಗೊಳ್ಳಲಿವೆ. ಇನ್ನು ₹3 ಕೋಟಿ ವೆಚ್ಚದ ವಸತಿ ನಿಲಯಕ್ಕೂ ಪ್ರಯತ್ನ ನಡೆದಿದ್ದು, ಜಾಲವಾಡಗಿ ಏತ ನೀರಾವರಿ ಯೋಜನೆಗೆ ಟೆಂಡರ್ ಕೊಟ್ಟಿದ್ದು, ಅದನ್ನೂ ಶೀಘ್ರ ಕೈಗೆತ್ತಿಕೊಳ್ಳುವಂತೆ ಒತ್ತಡ ಹೇರಲಾಗುವುದು. ಒಟ್ಟಾರೆ ಶಿರಹಟ್ಟಿ ಮತ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರ ನಡೆಯಲಿದ್ದು, ಇದಕ್ಕೆ ಜನರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಡಾ. ಕುಮಾರಸ್ವಾಮಿ ಹಿರೇಮಠ, ಕರಬಸಪ್ಪ ಹಂಚಿನಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದಗೌಡ ಪಾಟೀಲ, ರವೀಂದ್ರ ಉಪ್ಪಿನಬೆಟಗೇರಿ, ಮಲ್ಲಿಕಾರ್ಜುನ ಹಣಜಿ, ಪ್ರಶಾಂತಗೌಡ ಗುಡದಪ್ಪನವರ, ಬಸವರಾಜ ಬಿಳಿಮಗ್ಗದ, ರವಿಗೌಡ ಪಾಟೀಲ, ದೇವು ಹಡಪದ, ಸವಿತಾ ಸಾಸ್ವಿಹಳ್ಳಿ, ರವಿ ಲಮಾಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. 17ರಂದು ಮಹಾರಾಣಾ ಪ್ರತಾಪಸಿಂಹರ ಜಯಂತಿಗದಗ: ಬೆಟಗೇರಿಯ ರಜಪೂತ ಸಮಾಜದ ಆಶ್ರಯದಲ್ಲಿ ಮಹಾರಾಣಾ ಪ್ರತಾಪಸಿಂಹರ 486ನೇ ಜಯಂತಿ ಜೂ. 17ರಂದು ಬೆಳಗ್ಗೆ 9ಕ್ಕೆ ಇಲ್ಲಿಯ ಬಾಲಾಜಿ ರಸ್ತೆಯಲ್ಲಿರುವ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜಪೂತ ಸಮಾಜದ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಮ್ಸ್ ಆರ್ಥೊ ಸರ್ಜನ್ ಡಾ. ಭೀಮಸಿಂಗ್ ವಿ. ಸಮೋರೇಕರ್ ಹಾಗೂ ಧಾರವಾಡದ ಜಿಲ್ಲಾ ಆಸ್ಪತ್ರೆ ಹಿರಿಯ ತಜ್ಞ ವೈದ್ಯ ಡಾ. ಸಂತೋಷಸಿಂಗ್ ಶಾ. ರಂಗವಾಲೆ ಆಗಮಿಸುವರು.ಮಹಾರಾಣಾ ಪ್ರತಾಪಸಿಂಹರ ಕುರಿತು ಎಸ್.ಎ. ಜಮಾದಾರ ಉಪನ್ಯಾಸ ನೀಡವರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ರಜಪೂತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.