ದಾಬಸ್‍ಪೇಟೆ: ಸೋಲೂರು ಹೋಬಳಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ 31.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮೊದಲನೇ ಹಂತದಲ್ಲಿ ಕಾವೇರಿ ನೀರಾವರಿ ನಿಗಮದ ಮುಖೇನ 8.5 ಕೋಟಿ ವೆಚ್ಚದ ಅನುದಾನ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು
ದಾಬಸ್‍ಪೇಟೆ: ಸೋಲೂರು ಹೋಬಳಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ 31.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮೊದಲನೇ ಹಂತದಲ್ಲಿ ಕಾವೇರಿ ನೀರಾವರಿ ನಿಗಮದ ಮುಖೇನ 8.5 ಕೋಟಿ ವೆಚ್ಚದ ಅನುದಾನ ಮಂಜೂರು ಮಾಡಿಸಿದ್ದೇನೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.
ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯ ಗದ್ದುಗೆ ಮಠದಲ್ಲಿ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ನಾನು ಕ್ಷೇತ್ರಾದ್ಯಂತ ರಂಗೋಲಿ ಸ್ಪರ್ಧೆ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಸಾರ್ವಜನಿಕರು ರಸ್ತೆ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದರು. ರಂಗೋಲಿ ಸ್ಪರ್ಧೆ ನಂತರ ಕಾಮಗಾರಿಗೆ ಚಾಲನೆ ನೀಡುತ್ತೇನೆಂದು ಮಾತು ಕೊಟ್ಟಿದ್ದಂತೆ ಇಂದು ಮೊದಲನೇ ಹಂತದ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.17 ಕೆರೆಗಳಿಗೆ ನೀರು: ಹೇಮಾವತಿ ಜಲಾಶಯದಿಂದ ಸೋಲೂರು ಹೋಬಳಿ ಭಾಗದ 17 ಕೆರೆಗಳಿಗೆ ನೀರು ಹರಿಸಲಾಗುವುದು. ತುಮಕೂರಿನಲ್ಲಿ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ಕೋರ್ಟ್‍ನಲ್ಲಿ ಕೇಸ್ ನಡೆಯುತ್ತಿದೆ. ಪ್ರಕರಣ ಇತ್ಯರ್ಥವಾದ ಕೂಡಲೆ ಈ ಭಾಗಕ್ಕೆ ನೀರು ತರುತ್ತೇನೆ. ಈ ಹಿಂದೆ ಕಾವೇರಿ ನೀರನ್ನು ತರಲು ಭೂಮಿಪೂಜೆ ನೆರವೇರಿಸಿದ್ದೆ. ಆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ ಎಂದರು.
ಗದ್ದುಗೆ ಮಠಾಧೀಶರಾದ ಮಹಂತ ಸ್ವಾಮೀಜಿ ಮಾತನಾಡಿದರು. ಎಮ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ಗ್ರಾಪಂ ಮಾಜಿ ಸದಸ್ಯ ಹನುಮಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರುದ್ರಶರ್ಮಾ, ಮಾಜಿ ಅಧ್ಯಕ್ಷ ರಂಗಸ್ವಾಮಿ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.ಪೋಟೋ 5 :
ನೆಲಮಂಗಲ ತಾಲೂಕಿನ ಸೋಲೂರು ಹೋಬಳಿಯ ಗದ್ದುಗೆ ಮಠದಲ್ಲಿ ರಸ್ತೆ ಕಾಮಗಾರಿಗೆ ಗದ್ದುಗೆ ಮಠದ ಶ್ರೀ ಮಹಂತ ಸ್ವಾಮೀಜಿ, ಶಾಸಕ ಶ್ರೀನಿವಾಸ್ ಪೂಜೆ ನೆರವೇರಿಸಿದರು.