ಸಾಹಿತ್ಯ ಭವನದಲ್ಲಿ ಒಂದಲ್ಲ ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ ನಡೆಸಿ, ಕನ್ನಡ ಸಾಹಿತ್ಯವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಅವರು ಹೊರ ತಂದಿರುವ ಸಾಹಿತ್ಯ ದೀವಳಿಗೆ ಕೃತಿಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಲೇಖಕರು, ಸಾಹಿತಿಗಳ ಪರಿಚಯ, ಅವರಿಗೆ ಬಂದಿರುವ ಪ್ರಶಸ್ತಿ, ಪುರಸ್ಕಾರಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಸಾಹಿತ್ಯ ದೀವಳಿಗೆ ಕೃತಿಯನ್ನು ಹೊರತರುವ ಮೂಲಕ ಮೇನಾಗರ ಪ್ರಕಾಶ್ ಅವರು ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಸಾಹಿತಿಗಳ ಸಮಗ್ರ ಮಾಹಿತಿ ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದು ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಡಾ.ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಕಸಾಪ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇನಾಗರ ಪ್ರಕಾಶ್ ಅವರ ಸಾಹಿತ್ಯ ದೀವಳಿಗೆ ಕೃತಿ ಬಿಡುಗಡೆ ಮಾಡಿ ಮಾತನಾಡಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಮೇನಾಗರ ಪ್ರಕಾಶ್ ಅವರು ಕಸಾಪ ಅಧ್ಯಕ್ಷರಾಗಿ ವಿಭಿನ್ನವಾದ ರೀತಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ ಎಂದರು.

ಸಾಹಿತ್ಯ ಭವನದಲ್ಲಿ ಒಂದಲ್ಲ ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ ನಡೆಸಿ, ಕನ್ನಡ ಸಾಹಿತ್ಯವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಅವರು ಹೊರ ತಂದಿರುವ ಸಾಹಿತ್ಯ ದೀವಳಿಗೆ ಕೃತಿಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಲೇಖಕರು, ಸಾಹಿತಿಗಳ ಪರಿಚಯ, ಅವರಿಗೆ ಬಂದಿರುವ ಪ್ರಶಸ್ತಿ, ಪುರಸ್ಕಾರಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ಕೃತಿ ಸಂಶೋದನೆ ಮಾಡುವಂತಹ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಜಿಲ್ಲೆಯ ಸಮಗ್ರ ಸಾಹಿತಿಗಳ ಮಾಹಿತಿಯನ್ನು ಒಳಗೊಂಡ ಅತ್ಯಂತ ವಿಶಿಷ್ಠವಾದ ಕೃತಿ ಇದಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಭಿನ್ನ ಕೃತಿಗಳನ್ನು ಹೊರತರುವ ಮೂಲಕ ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಘನತೆ ಹೆಚ್ಚಿಸುವ ಕೆಲಸವನ್ನು ಮೇನಾಗರ ಪ್ರಕಾಶ್ ಅವರು ಮಾಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರೊ.ಎಂ.ಕೃಷ್ಣೇಗೌಡ, ಪ್ರೊ.ಜಯಪ್ರಕಾಶ್‌ಗೌಡ, ಪ್ರೊ.ಬಿ.ನಾರಾಯಣಗೌಡ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು.ಜ. 27ರಂದು ಸವಿತಾ ಮಹರ್ಷಿ ಜಯಂತಿ ಆಚರಣೆ

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜ.27 ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಯನ್ನುನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಿಇಎಸ್ ಪದವಿ ಪೂರ್ವ ಕಾಲೇಜು ಉಪನ್ಯಾಸರಾದ ಡಾ.ಎಂ.ಎಸ್.ಅನಿತಾ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೇಂದ್ರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸ್ಥಳೀಯ ಸಂಸ್ಥೆಗಳ ಹಾಗೂ ನಿಗಮ ಮಂಡಳಿ ಅಧ್ಯಕ್ಷರು

ಗಣ್ಯರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜ.21 ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯನ್ನು ಆಯೋಜಿಸಲಾಗಿದೆ. ವಿಶ್ರಾಂತ ಪ್ರಾಧ್ಯಾಪಕ ಡಾ.ಎಸ್.ಬಿ.ಶಂಕರೇಗೌಡ ಉಪನ್ಯಾಸ ನೀಡಲಿದ್ದಾರೆ. ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ.ಜ.20 ರಂದು ಶಿವಯೋಗಿ ಸಿದ್ದರಾಮ ಜಯಂತಿ

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜ.20 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಯೋಗಿ ಸಿದ್ದರಾಮ ಜಯಂತಿ ಆಚರಣೆಯನ್ನು ಆಯೋಜಿಸಲಾಗಿದೆ. ನಿವೃತ್ತ ಶಿಕ್ಷಣಾಧಿಕಾರಿ ಆರ್.ಮಹದೇವಪ್ಪ ಉಪನ್ಯಾಸ ನೀಡಲಿದ್ದಾರೆ.