ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ

| Published : Dec 12 2023, 12:45 AM IST

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾವೇರಿ

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಕೂಡಲೇ ತ್ವರಿತವಾಗಿ ತರಗತಿ ನಡೆಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ತಾಲೂಕಿನ ಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಪ್ರಾಂಶುಪಾಲ ಡಿ.ಟಿ. ಪಾಟೀಲರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್. ಮಾತನಾಡಿ, ರಾಜ್ಯದಲ್ಲಿ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ. ೨೩ರಿಂದ ರಾಜ್ಯದಲ್ಲಿ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಈಗ ಅತಿಥಿ ಉಪನ್ಯಾಸಕರ ಸರ್ಕಾರದ ಮಧ್ಯ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಭವಿಷ್ಯ ಹಾಳುಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದಷ್ಟು ಬೇಗ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ತರಗತಿ ಒಳಗೆ ಉಪನ್ಯಾಸಕರನ್ನು ಕಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಪನ್ಯಾಸಕರೊಂದಿಗೆ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಎಸ್‌ಎಫ್‌ಐ ಮುಖಂಡ ಪ್ರವೀಣ ಮರಾಠಿ ಮಾತನಾಡಿ, ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಿ ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಲು ಮುಂದಾಗಬೇಕು. ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹೇಶ ಹೂಗಾರ, ಈರನಗೌಡ ಪಾಟೀಲ, ಅರುಣ್ ಬಿ.ಜಿ., ಭರಮಪ್ಪ ಎಚ್., ಕಿರಣ ಎಲ್., ನಾಗರಾಜ ಎಸ್.ಕೆ., ಹಾಲೇಶ್ ಆರ್.ಡಿ. ಇತರರು ಇದ್ದರು.