ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ

| Published : Sep 28 2024, 01:17 AM IST

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ
Share this Article
  • FB
  • TW
  • Linkdin
  • Email

ಸಾರಾಂಶ

ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುತ್ತಿದ್ದು, ಕಾರ್ಯದೊತ್ತಡ ಹೆಚ್ಚಾಗಿದೆ.

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ತಾಲೂಕು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಗ್ರಾಪಂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಬೆಳೆ ಸಮೀಕ್ಷೆ, ಕೃಷಿ ಗಣತಿ, ನೀರಾವರಿ ಗಣತಿ, ದಿಶಾಂಕ್, ವೋಟರ್ ಹೆಲ್ತ್‌ಲೈನ್, ಪೌತಿ ಆಂದೋಲನ ಆ್ಯಪ್, ಸಿ–ವಿಜಿಲ್ ಆ್ಯಪ್, ಇ–ಆಫೀಸ್, ಹಕ್ಕುಪತ್ರ, ಆಧಾರ್ ಸೀಡ್, ಸಂಯೋಜನೆ, ಲ್ಯಾಂಡ್ ಬಿಟ್, ನಮೂನೆ 1–5ರ ವೆಬ್ ಅಪ್ಲಿಕೇಶನ್, ಸಂರಕ್ಷಣೆ, ನವೋದಯ, ಗರುಡ ಆಪ್, ಭೂಮಿ, ಬೆಳೆ ಸಮೀಕ್ಷೆಯ ಅನುಮೋದನೆ ವೆಬ್ ಆಪ್, ಪಿಎಂ. ಕಿಸಾನ್‌ ವೆಬ್ ಆಪ್, ಸೇರಿದಂತೆ ಇನ್ನಿತರೆ ಸೇವೆಗಳನ್ನು ಸ್ಥಗಿತಗೊಳಿಸಿ ರಾಜ್ಯದ ಎಲ್ಲ ತಾಲೂಕು ಕಚೇರಿಗಳ ಮುಂದೆ ಮುಷ್ಕರ ನಡೆಯುತ್ತಿದೆ.

ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುತ್ತಿದ್ದು, ಕಾರ್ಯದೊತ್ತಡ ಹೆಚ್ಚಾಗಿದೆ. ತಾಂತ್ರಿಕ ಅರ್ಹತೆ ಇಲ್ಲದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ತಾಂತ್ರಿಕ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ. ವೇತನ ಹೆಚ್ಚಳ ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಹಲವು ಸಲ ಮನವಿ ಸಲ್ಲಿಸಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ, ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು. ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಂದಾಯ ನೌಕರರ ಸಂಘದ ಅಧ್ಯಕ್ಷ ಯೋಗೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ಸುಗುಣ, ಖಜಾಂಚಿ ಜಾಹಿದಬಾನು, ಉಪಾಧ್ಯಕ್ಷ ವೇದಕುಮಾರ್, ಗ್ರಾಮ ಆಡಳಿತ ಸಂಘದ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ದೀಕ್ಷ, ಗೌರವಧ್ಯಕ್ಷ ಕೇಶವಪೂಜಾ, ಉಪಾಧ್ಯಕ್ಷ ಸತೀಶ್ ಇದ್ದರು.