ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಭಾರತೀಯ ಪುರಾತತ್ವ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಗೆ ಸೇರಿರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಸ್ವತ್ತು ಎಂದು ದಾಖಲಿಸಿದ್ದನ್ನು ತಕ್ಷಣ ತೆರವುಗೊಳಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾದ್ಯಂತ ಭಾರತೀಯ ಪುರಾತತ್ವ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಗೆ ಸೇರಿರುವ ಆಸ್ತಿಗಳನ್ನು ಕಂದಾಯ ದಾಖಲೆಗಳಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಸ್ವತ್ತು ಎಂದು ದಾಖಲಿಸಿದ್ದನ್ನು ತಕ್ಷಣ ತೆರವುಗೊಳಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜಿಲ್ಲಾಡಳಿತ ತಯಾರಿಸಿದ ಯಾದಿ ಪ್ರಕಾರ ಸುಮಾರು 357 ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲು ಮಾಡುವ ಹುನ್ನಾರ ನಡೆದಿರುವುದು ಕಂಡುಬಂದಿದೆ. ಹೀಗಾಗಿ ಕಂದಾಯ ದಾಖಲೆಗಳಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಸ್ವತ್ತು ಎಂದು ದಾಖಲಿಸುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ವಿಶ್ವಹಿಂದೂ ಪ್ರಾಂತ ಪ್ರಮುಖ ಸುನೀಲ ಭೈರವಾಡಗಿ, ಛಗನಬಾಲ ರಾಜಪುರೋಹಿತ, ಬಸನಗೌಡ ಬಿರಾದಾರ, ಸಂತೋಷ ಯಂಕಪ್ಪಗೋಳ, ಸಂತೋಷ ಶಿರಸಂಗಿ, ರಮೇಶ ನಿಡೋಣಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.