ವಾಣಿಜ್ಯ ಮಳಿಗೆಗಳನ್ನು ಪ.ಜಾತಿ, ಪಂಗಡಕ್ಕೆ ಮೀಸಲಿರಿಸಲು ಒತ್ತಾಯ

| Published : Jul 01 2024, 01:47 AM IST

ಸಾರಾಂಶ

ಚಿಕ್ಕಮಗಳೂರು, ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡ ಬೇಕು ಎಂದು ಬಿಜೆಪಿ ಎಸ್ಸಿ ಘಟಕದ ಮುಖಂಡರು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಕೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡ ಬೇಕು ಎಂದು ಬಿಜೆಪಿ ಎಸ್ಸಿ ಘಟಕದ ಮುಖಂಡರು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಬಳಿಕ ಮಾತನಾಡಿದ ಬಿಜೆಪಿ ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ನಗರದ ಕೆ.ಎಂ.ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಕಟ್ಟಡದಲ್ಲಿ ಎಸ್ಸಿ, ಎಸ್ಟಿ ಜನಾಂಗದ ನಿರುದ್ಯೋಗ ಯುವಕ, ಯುವತಿಯರಿಗೆ ಮಳಿಗೆಗಳನ್ನು ಮೀಸಲಿರಿಸಬೇಕೆಂದು ಆಗ್ರಹಿಸಿದರು.ದಲಿತ ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ಷೇತ್ರದ ಮಾಜಿ ಶಾಸಕರು 2020ರಲ್ಲಿ ಸರ್ಕಾರಕ್ಕೆ ಪತ್ರ ಬರೆದು ಪ.ಜಾತಿ, ಪಂಗಡದ ಜನಾಂಗದವರ ವ್ಯಾಪಾರ ಉದ್ದೇಶಕ್ಕೆ 3 ಕೋಟಿ ರು. ಅನುದಾನ ಬಿಡುಗಡೆಗೊಳಿಸಿದ್ದರು ಎಂದು ಹೇಳಿದರು.ಲೋಕೋಪಯೋಗಿ ಇಲಾಖೆಯಿಂದ ವಾಣಿಜ್ಯ ಮಳಿಗೆ ನಿರ್ಮಿಸಲಾಗಿದೆ. ನಗರಸಭೆಯವರು ಸರ್ಕಾರದ ಆದೇಶ ಉಲ್ಲಂಘಿಸಿ ಸಾಮಾನ್ಯ ವರ್ಗಗಳಿಗೆ ಮಳಿಗೆನೀಡುತ್ತಿರುವುದು ಸಮುದಾಯಕ್ಕೆ ಎಸಗಿರುವ ದೊಡ್ಡ ವಂಚನೆ ಎಂದು ಆರೋಪಿಸಿದರು.ನಗರಸಭೆಯಲ್ಲಿ ನಡೆದ ಹರಾಜು ಪ್ರಕ್ರಿಯೆ ಮೊಟಕುಗೊಳಿಸಿ ಪರಿಶಿಷ್ಟ ಜಾತಿ, ಪಂಗಡದ ಯುವಕ, ಯುವತಿಯರಿಗೆ ನೀಡಬೇಕು. ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ನಗರಸಭೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸ ಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಘಟಕದ ನಗರ ಮಂಡಲ ಉಪಾಧ್ಯಕ್ಷ ಹಿರೇಮಗಳೂರು ಬಿ.ರೇವನಾಥ್, ಗ್ರಾಮಾಂತರ ಸಹ ವಕ್ತಾರ ಹಂಪಯ್ಯ, ಮುಖಂಡರಾದ ಜಗದೀಶ್, ಧನಂಜಯ್, ಶಿವಕುಮಾರ್, ಧರ್ಮರಾಜ್, ಶಿವಪ್ರಸಾದ್, ನಾಗಣ್ಣ ಇದ್ದರು.

30 ಕೆಸಿಕೆಎಂ 2ಚಿಕ್ಕಮಗಳೂರಿನಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್ಸಿ ಘಟಕದ ಮುಖಂಡರು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.