ಕಡ್ಡಾಯ ಮತದಾನ ಪ್ರಜಾಪ್ರಭುತ್ವದ ಬುನಾದಿ

| Published : Mar 30 2024, 12:54 AM IST

ಸಾರಾಂಶ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮತದಾನದ ಪ್ರಮಾಣ ನೂರರಷ್ಟಾದರೆ ಮತದಾನದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ

ಮುಂಡರಗಿ: ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನು ಗಟ್ಟಿಗೊಳಿಸಬೇಕು ಎಂದು ತಾಪಂ ಇಒ ವಿಶ್ವನಾಥ ಹೊಸಮನಿ ಹೇಳಿದರು.

ಪಟ್ಟಣದ ತಾಪಂ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ಚುನಾವಣೆ ಸ್ವೀಪ್ ಸಮಿತಿ ವತಿಯಿಂದ ನಡೆದ ಅಂಗವಿಕಲರ ಮೂಲಕ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನ ಸಂವಿಧಾನ ನಮಗೆ ನೀಡಿರುವ ಅಮೂಲ್ಯ ಹಕ್ಕು.ಆಸೆ-ಆಮಿಷಗಳಿಗೆ ಒಳಗಾಗದೆ ಉತ್ತಮ ಎನಿಸಿದ ಅಭ್ಯರ್ಥಿಗೆ ಮತ ಚಲಾಯಿಸುವ ಕೆಲಸ ನಮ್ಮ ಪ್ರಮುಖ ಆದ್ಯತೆಯಾಗಬೇಕು ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮತದಾನದ ಪ್ರಮಾಣ ನೂರರಷ್ಟಾದರೆ ಮತದಾನದ ಪ್ರಾಮುಖ್ಯತೆಗೆ ಅರ್ಥ ಬರುತ್ತದೆ.ಆ ಕಾರಣಕ್ಕಾಗಿ ಮತ ಚಲಾಯಿಸುವ ಮೂಲಕ ಸಂವಿಧಾನ ನಮಗೆ ನೀಡಿರುವ ಹಕ್ಕನ್ನು ತಪ್ಪದೇ ಚಲಾಯಿಸಬೇಕು ಎಂದರು.

ತಹಸೀಲ್ದಾರ ಧನಂಜಯ ಮಾಲಗತ್ತಿ ಮಾತನಾಡಿ, ಸಾರ್ವಜನಿಕರು ಮತದಾನದಿಂದ ವಿಮುಖರಾಗದೆ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಜವಾಬ್ದಾರಿ ಮೆರೆಯಬೇಕು. ಮುಂಡರಗಿ ತಾಲೂಕಿನ ಎಲ್ಲ ಗ್ರಾಮಗಳಲ್ಲೂ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಪಟ್ಟಣದ ತಾಪಂ ಆವರಣದಿಂದ ಆರಂಭವಾದ ಮತದಾನ ಜಾಗೃತಿ ಅಂಗವಿಕಲರ ಬೈಕ್ ಜಾಥಾ ಬೃಂದಾವನ ವೃತ್ತ, ಮೇನ್ ಬಜಾರ್, ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸುತ್ತಾ ಮತದಾನ ಜಾಗೃತಿ ಕುರಿತಾದ ವಿಶೇಷ ಘೋಷಣೆ ಕೂಗುವುದರೊಂದಿಗೆ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಪ್ರವೀಣ ಗೋಣೆಮ್ಮನವರ, ಪಿಡಿಒ ಫಕ್ರುದ್ದೀನ್ ನದಾಫ ಹಾಗೂ ತಾಪಂ ಸಿಬ್ಬಂದಿ ಇದ್ದರು.