ಸೋಮವಾರಪೇಟೆ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೇಂದ್ರ ಕೊಡುಗೆ

| Published : Jul 17 2025, 12:30 AM IST

ಸೋಮವಾರಪೇಟೆ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೇಂದ್ರ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್‌ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಗಣ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಂದಿನ ಸ್ಮರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಡಿಜಿಟಲ್ ಸಾಕ್ಷರತೆಯಲ್ಲಿ ಮುಂದುವರಿದರೆ ಮಾತ್ರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಎಚ್‌ಪಿ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಚೂರಿಗಿಡ್ನ ವಿಜಯ್‌ಕುಮಾರ್ ಹೇಳಿದರು.ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೪೦ ಲಕ್ಷ ರು. ವೆಚ್ಚದಲ್ಲಿ ಎಚ್‌ಪಿ ಸಂಸ್ಥೆಯಿಂದ ನಿರ್ಮಿಸಲಾದ ಸುಸಜ್ಜಿತ ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ಸಾಹಿತಿ ಹಾಗೂ ಶಿಕ್ಷಕ ಕಾಜೂರು ಸತೀಶ್ ಮಾತನಾಡಿ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಂಪ್ಯೂಟರ್ ಶಿಕ್ಷಣವನ್ನು ಪಡೆದು ವಿದ್ಯಾರ್ಜನೆ ಮಾಡಿದ ಶಾಲೆಗೆ ಹಾಗೂ ಗುರುಹಿರಿಯರಿಗೆ ಕೀರ್ತಿಯನ್ನು ತರಬೇಕೆಂದು ಆಶಿಸಿದರು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಚೌಡ್ಲು ಪಂಚಾಯಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಉದ್ಯಮಿ ಚೂರಿಗಿಡ್ನ ವೇಣು, ಲಲಿತ ರಂಗಸ್ವಾಮಿ, ಮುಖ್ಯ ಶಿಕ್ಷಕಿ ಯಶೋಧ, ಬಿಆರ್‌ಸಿ ಪ್ರೇಮಾ ಹಾಗೂ ರಾಷ್ಟ್ರೀಯ ಹಾಕಿ ತರಬೇತುದಾರ ಸಿ.ಬಿ.ದೇವದಾಸ್ ಇದ್ದರು.