ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯವಶ್ಯ

| Published : Aug 08 2024, 01:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬೈಲಹೊಂಗಲ ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯವಾಗಿದೆ ಎಂದು ಸುಕ್ಷೇತ್ರ ಇಂಚಲ ಸಾಧು-ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಸುಕ್ಷೇತ್ರ ಇಂಚಲ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆ ಹಾಗೂ ಇನೋವಿ ಮೊಬೈಲಿಟಿ ಸೆಲ್ಯೂಷನ್ ಪ್ರೈ.ಲಿ. ಇವರ ಸಹಯೋಗದೊಂದಿಗೆ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಿಂದೆಲ್ಲಾ ಅಕ್ಷರ ಜ್ಞಾನವಿಲ್ಲದವರನ್ನು ಅನಕ್ಷರಸ್ಥರೆಂದು ಪರಿಗಣಿಸಲಾಗುತ್ತಿತ್ತು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯವಾಗಿದೆ ಎಂದು ಸುಕ್ಷೇತ್ರ ಇಂಚಲ ಸಾಧು-ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು.

ಸಮೀಪದ ಸುಕ್ಷೇತ್ರ ಇಂಚಲ ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆ ಹಾಗೂ ಇನೋವಿ ಮೊಬೈಲಿಟಿ ಸೆಲ್ಯೂಷನ್ ಪ್ರೈ.ಲಿ. ಇವರ ಸಹಯೋಗದೊಂದಿಗೆ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಿಂದೆಲ್ಲಾ ಅಕ್ಷರ ಜ್ಞಾನವಿಲ್ಲದವರನ್ನು ಅನಕ್ಷರಸ್ಥರೆಂದು ಪರಿಗಣಿಸಲಾಗುತ್ತಿತ್ತು. ಆದೀಗ ಕಂಪ್ಯೂಟರ್ ಜ್ಞಾನವಿಲ್ಲದವರನ್ನು ಅನಕ್ಷರಸ್ಥರಿಗೆ ಹೋಲಿಸಲಾಗುತ್ತಿದೆ. ಅಷ್ಟರಮಟ್ಟಿಗೆ ಮಾನವನ ಜೀವನದ ಅವಿಭಾಜ್ಯ ಅಂಗವಾಗಿ ಕಂಪ್ಯೂಟರ್ ಪರಿಗಣಿಸಲ್ಪಟ್ಟಿದೆ. ಹೀಗಾಗಿ ಪ್ರತಿಯೊಬ್ಬರು ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಡಿಜಿಟಲ್ ಯುಗ ಆರಂಭವಾಗಲಿದೆ ಎಂದರು. ಸಂಸ್ಥೆಯ ಆಡಳಿತಾಧಿಕಾರಿ ಪೂರ್ಣಾನಂದಭಾರತಿ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗಣಕಯಂತ್ರದ ಸಾಮಾನ್ಯ ಜ್ಞಾನ ಪಡೆದುಕೊಳ್ಳಬೇಕು. ಇಂದಿನ ಕಂಪ್ಯೂಟರ್ ಯುಗದಲ್ಲಿ ಸಂಪರ್ಕ ಸಂಹವನಕ್ಕೆ ಇ-ಮೇಲ್ ಹಾಗೂ ಇತರ ಸಾಮಾಜಿಕ ಜಾಲತಾಣಗಳು ಹೆಚ್ಚು ಉಪಯುಕ್ತವಾಗಿವೆ. ಅವುಗಳ ನಿರ್ವಹಣೆ ವೇಳೆ ಎಚ್ಚರ ವಹಿಸಬೇಕು ಎಂದರು.

ಇನೊವಿ ಮೊಬೈಲ್ ಕಂಪನಿಯ ಅಮಿತ್ ಇಂಗಳೆ, ವಾಸು, ಚೇತನ ಶೆಟ್ಟಿ ಅವರು ₹24 ಲಕ್ಷ ಮೌಲ್ಯದ ಕಂಪ್ಯೂಟರ್ ನೀಡಿದ್ದಕ್ಕೆ ಶ್ರೀಗಳು ಸತ್ಕರಿಸಿದರು. ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಶಾಸಕ ಮಹಾಂತೇಶ ದೊಡಗೌಡರ, ಮಲ್ಲೇಶ ಶರಣರು, ಮಾಜಿ ಚೇರ್ಮನ್ ಎಸ್.ಎಂ. ರಾಹುತನವರ, ಎಸ್.ಎನ್. ಕೊಳ್ಳಿ, ಜಿ. ವಿನಯಮೋಹನ, ವಿ.ಎಸ್. ಬನ್ನೆಪ್ಪಗೂಳ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಇದ್ದರು.