ಕೇಂದ್ರದಿಂದ ಎಲ್ಲ ಸಹಕಾರ ಸಂಘಗಳ ಗಣಕೀಕರಣ: ಬಿರಾದಾರ

| Published : Feb 22 2024, 01:51 AM IST / Updated: Feb 22 2024, 01:52 AM IST

ಸಾರಾಂಶ

ಮುದ್ದೇಬಿಹಾಳ: ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪೂರ್ಣ ಗಣಕೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಎಲ್ಲ ಸಂಘಗಳಿಗೆ ಕಂಪ್ಯೂಟರ್ ಒದಗಿಸಿ ಮೂಲಕ ಏಕರೂಪದ ತಂತ್ರಾಂಶ ಅಳವಡಿಸಿ ಸಂಘಗಳ ಮಾಹಿತಿ ಸಂಗ್ರಹಿಸುವ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ ಅಳವಡಿಸಲು ಈ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮಾಜಿ ನಿರ್ದೇಶಕ ಸೋಮನಗೌಡ ಎನ್ ಬಿರಾದಾರ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸಂಪೂರ್ಣ ಗಣಕೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಎಲ್ಲ ಸಂಘಗಳಿಗೆ ಕಂಪ್ಯೂಟರ್ ಒದಗಿಸಿ ಮೂಲಕ ಏಕರೂಪದ ತಂತ್ರಾಂಶ ಅಳವಡಿಸಿ ಸಂಘಗಳ ಮಾಹಿತಿ ಸಂಗ್ರಹಿಸುವ ಮತ್ತು ಪಾರದರ್ಶಕ ಆಡಳಿತ ವ್ಯವಸ್ಥೆ ಅಳವಡಿಸಲು ಈ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮಾಜಿ ನಿರ್ದೇಶಕ ಸೋಮನಗೌಡ ಎನ್ ಬಿರಾದಾರ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು, ವಿಜಯಪುರ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ, ಸಹಕಾರ ಇಲಾಖೆ ವಿಜಯಪುರ ಸಂಯುಕ್ತಾಶ್ರಯದಲ್ಲಿ ಮುದ್ದೇಬಿಹಾಳ ತಾಲೂಕಿನ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳು ಹಾಗೂ ಕಂಪ್ಯೂಟರ್ ಆಪರೇಟರ್‌ಗಳಿಗೆ ವಿಶೇಷ ಸಹಕಾರ ತರಬೇತಿ ಕಾರ್ಯಕ್ರಮ ನಡೆಯಿತು. ಇಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕ ಶಶಿಧರ ಎಂ. ಬೆಣ್ಣೂರ ಜಿಲ್ಲಾ ಸಹಕಾರ ಯೂನಿಯನ್ ನಿಂದ ನಿರಂತರವಾಗಿ ಸಹಕಾರ ಸಂಘಗಳಿಗೆ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಯುವಂತೆ ತಿಳಿಸಿದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕರರಾದ ಚೇತನ ಬಾವಿಕಟ್ಟೆ, ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮುದ್ದೇಬಿಹಾಳ ತಾಲೂಕ ನೋಡಲ್ ಅಧಿಕಾರಿ ಜನಿವಾರ ಉಪಸ್ಥಿತರಿದ್ದರು. ವಿಜಯಪುರ ಜಿಲ್ಲಾ ಮ್ಯಾನೇಜರ ಇ-ಗವರ್ನನಸ್ ಕಚೇರಿಯ ಶ್ರೀಧರ ರತ್ನಾಕರ, ಕಾಮನ್ ಸರ್ವಿಸ್ ಸೆಂಟರ್ ನ ಕಾರ್ಯವಿಧಾನಗಳ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಬಿಸನಾಳ ಇದ್ದರು.