ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಸಚಿವ ಜಾರ್ಜ್‌

| Published : Feb 11 2024, 01:50 AM IST

ಭೂ ದಾಖಲೆ ಗಣಕೀಕರಣ ರೈತರಿಗೆ ಅನುಕೂಲ: ಸಚಿವ ಜಾರ್ಜ್‌
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು.

ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭೂ ದಾಖಲೆ ಗಣಕೀಕರಣ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.ತಾಲೂಕು ಕಚೇರಿಯಲ್ಲಿ ಭೂ ದಾಖಲೆಗಳ ಗಣಕೀಕರಣಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡಿರುವುದರಿಂದ ರೈತರ ದಾಖಲೆ ಕಳೆದು ಹೋಗದೆ ಶಾಶ್ವತವಾಗಿ ಉಳಿಯಲಿದೆ ಎಂದರು.ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಜಿಲ್ಲಾಡಳಿತದಿಂದ ಭೂ ಸುರಕ್ಷಾ ಯೋಜನೆಯನ್ನು ಸಚಿವರು ಉದ್ಘಾಟಿಸಿದ್ದು ಇದರ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆದು ಕೊಳ್ಳಬೇಕೆಂದು ವಿನಂತಿಸಿದರು. ತಮ್ಮ ಅಗತ್ಯ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸುವ ರೈತರಿಗೆ ಭೂ ದಾಖಲೆಗಳನ್ನು ಒದಗಿಸಲು ಇದು ಪೂರಕವಾಗಿದೆ. ಜೊತೆಗೆ ಸಂಬಂಧಪಟ್ಟ ಅರ್ಜಿದಾರರಿಗೆ ದಾಖಲೆ ಒದಗಿಸಿದ ಸಂಪೂರ್ಣ ಮಾಹಿತಿ ರವಾನೆಯಾಗಲಿದೆ ಎಂದು ಹೇಳಿದರು. ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ವ್ಯವಸ್ಥೆ ಕಲ್ಪಿಸಬೇಕೆಂಬ ದೃಷ್ಠಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಮೂಲಕ ಭೂ ದಾಖಲೆಗಳ ಡಿಜಿಟಲ್‌ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ, ಉಪ ವಿಭಾಗಾಧಿಕಾರಿ ದಲ್ಜಿತ್‌ಕುಮಾರ್, ತಹಶೀಲ್ದಾರ್ ಡಾ. ಸುಮಂತ್ ಉಪಸ್ಥಿತರಿದ್ದರು.ಪೋಟೋ ಫೈಲ್‌ ನೇಮ್‌ 10 ಕೆಸಿಕೆಎಂ 2ಭೂ ದಾಖಲೆಗಳ ಗಣಕೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅವರು ತಾಲೂಕು ಕಚೇರಿಯಲ್ಲಿ ಶನಿವಾರ ಚಾಲನೆ ನೀಡಿದರು. ಶಾಸಕ ಎಚ್‌.ಡಿ. ತಮ್ಮಯ್ಯ, ಡಿಸಿ ಮೀನಾ ನಾಗರಾಜ್‌, ಮಾಜಿ ಎಂಎಲ್‌ಸಿ ಗಾಯತ್ರಿ ಶಾತೇಗೌಡ ಇದ್ದರು.