ಸಾರಾಂಶ
ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾಧ್ಯ. ಶಿಕ್ಷಣ ಶ್ರೇಷ್ಠ ನಾಗರಿಕರನ್ನಾಗಿ ಮಾಡುತ್ತದೆ ಎಂದು ನಿವೃತ್ತ ಶಿಕ್ಷಕ ಮಂಜಪ್ಪ ಗುಳಕೊಪ್ಪ ಹೇಳಿದರು.
ರಿಪ್ಪನ್‍ಪೇಟೆ: ವಿದ್ಯಾರ್ಥಿಗಳ ಕಲಿಕೆಯಲ್ಲಿ ಏಕಾಗ್ರತೆ ಅಗತ್ಯವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಆಭ್ಯಾಸ ಮಾಡಿದಲ್ಲಿ ಮಾತ್ರ ಗುರಿ ತಲುಪಲು ಸಾಧ್ಯ. ಶಿಕ್ಷಣ ಶ್ರೇಷ್ಠ ನಾಗರಿಕರನ್ನಾಗಿ ಮಾಡುತ್ತದೆ ಎಂದು ನಿವೃತ್ತ ಶಿಕ್ಷಕ ಮಂಜಪ್ಪ ಗುಳಕೊಪ್ಪ ಹೇಳಿದರು.
ರಿಪ್ಪನ್‍ಪೇಟೆ ಸಮೀಪದ ಹೊಂಬುಜ ಶ್ರೀಪದ್ಮಾಂಬ ಪ್ರೌಢಶಾಲೆಯ ಶ್ರೀರಂಗರಾವ್ ಸಭಾಭವನದಲ್ಲಿ ಮಿಲನ ಅಸೋಸಿಯೇಷನ್ ವತಿಯಿಂದ ಅಯೋಜಿಸಿದ್ದ 5ನೇ ವರ್ಷದ ನವೋದಯ ಮತ್ತು ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯ ಉಚಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೋಷಕವರ್ಗ ಮತ್ತು ಶಿಕ್ಷಕವರ್ಗ ಸದಾ ಶ್ರಮಿಸುವಂತಾಗಬೇಕು. ಮಕ್ಕಳ ದೈನಂದಿನ ಬೆಳವಣಿಗೆ ಹಾಗೂ ಶಿಕ್ಷಣದ ಕಡೆ ಜಾಗೃತರಾಗಿದ್ದಾಗ ಮಾತ್ರ ವಿದ್ಯಾರ್ಥಿಗಳು ಪ್ರಗತಿ ಹೊಂದಲು ಸಾಧ್ಯ ಎಂದರು.
ಪಟ್ಟಣದಲ್ಲಿನ ಮಕ್ಕಳಿಗೆ ಇಂತಹ ಸೌಲಭ್ಯಗಳು ದೊರಕುತ್ತಿದ್ದು, ಗ್ರಾಮಾಂತರದಲ್ಲಿನ ಮಕ್ಕಳು ಈ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಅದನ್ನು ಮನಗಂಡು ಇಲ್ಲಿನ ಪ್ರಕಾಶಜೋಯ್ಸ್ ತಮ್ಮ ಸ್ವಂತ ಖರ್ಚಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವ ಮೂಲಕ ಅವರನ್ನು ಮೊರಾರ್ಜಿ ನವೋದಯ ವಸತಿ ಶಾಲೆಯ ಪರಿಚಯ ಅಯ್ಕೆ ಪ್ರಕ್ರಿಯೆ ಮಾಹಿತಿ ಕೋಚಿಂಗ್ ಕೊಡುವ ಮೂಲಕ ಸ್ಪರ್ಧಾತ್ಮಕ ಪರಿಕ್ಷೆಯನ್ನು ಎದುರಿಸುವ ಬಗ್ಗೆ ಮಕ್ಕಳಿಗೆ ಉಪಯುಕ್ತ ಮಾಹಿತಿಯನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಉಚಿತವಾಗಿ ನೀಡುತ್ತಿರುವುದು ಪ್ರಶಂಸನೀಯ ಎಂದರು.ಶಿಕಾರಿಪುರ ಪಶು ಅಸ್ಪತ್ರೆಯ ವೈದ್ಯಧಿಕಾರಿ ಡಾ.ಆಶೋಕ್, ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಿತೀಶ್ ಮಾತನಾಡಿದರು.
ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕ ಪ್ರಕಾಶ್‍ಜೋಯ್ಸ್, ಲಕ್ಷ್ಮಮ್ಮ, ಆಭೀಷೇಕ್, ಸಂಜಯ್, ನಾಗೇಶ್‍ನಾಯ್ಕ್, ಪೂರ್ಣೇಶ್, ಸುನೀಲ್, ಪ್ರಹ್ಲಾದ್ ಮತ್ತಿತರರಿದ್ದರು.