ಸಾರಾಂಶ
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಕೊಡಗಿನಲ್ಲಿ ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವರ್ತರಾಗಿ ಗಮನಸೆಳೆದಿದ್ದಾರೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಕೊಡಗಿನಲ್ಲಿ ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲೂ ಕಾರ್ಯಪ್ರವರ್ತರಾಗಿ ಗಮನ ಸೆಳೆದಿದ್ದಾರೆ.ಇಲ್ಲಿನ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ತಮ್ಮ ಮಹಿಳಾ ಸಹೋದ್ಯೋಗಿಯ ಸೀಮಂತ ಕಾರ್ಯವನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ಗಮನ ಸೆಳೆದಿದ್ದಾರೆ.
ಸಿಬ್ಬಂದಿ ಸಿ.ಪಿ ಪೂರ್ಣಿಮಾ ಅವರ ಸೀಮಂತ ಕಾರ್ಯವನ್ನು ಪೊಲೀಸ್ ಠಾಣೆಯಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು. ಮಡಿಲು ತುಂಬಿ ಬಳೆ, ಕುಂಕುಮ, ವಸ್ತ್ರ ವಿವಿಧ ಬಗೆಯ ತಿಂಡಿ ತಿನಿಸುಗಳು, ಹಣ್ಣು ಹಂಪಲು, ತಾಂಬೂಲ ಸೇರಿದಂತೆ ಶೋಢಷೋಪಚಾರಗಳನ್ನು ನೆರವೇರಿಸಿ ಉತ್ತಮ ಕೌಟುಂಬಿಕ ಜೀವನ ನಿರ್ವಹಣೆಗಾಗಿ ಹಾರೈಸಿದರು.ಠಾಣಾಧಿಕಾರಿ ಮಂಜುನಾಥ ಮಾತನಾಡಿ, ಮಹಿಳೆಯ ಜೀವನದಲ್ಲಿ ನವಮಾಸ ಪ್ರಮುಖ ಘಟ್ಟ. ತಾಯಿಯಾಗಿ ಜೀವನ ನಿರ್ವಹಣೆ ಮಾಡಬೇಕಾದಲ್ಲಿ ಆಕೆಗೆ ದೇವರ ಅನುಗ್ರಹವು ಮುಖ್ಯ. ನಮ್ಮೆಲ್ಲರ ಹಾರೈಕೆಯೂ ಅಗತ್ಯ. ಈ ನಿಟ್ಟಿನಲ್ಲಿ ಸೀಮಂತ ಕಾರ್ಯ ನೆರವೇರಿಸಲಾಗಿದೆ ಎಂದರು.
ಠಾಣೆಯ ಸಿಬ್ಬಂದಿ ಹಾಜರಿದ್ದರು.