ಕಾರುಗುಂದ: 1855ನೇ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭ

| Published : Sep 30 2024, 01:31 AM IST

ಕಾರುಗುಂದ: 1855ನೇ ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿತು. ಶಿಬಿರದ ಯಶಸ್ವಿಗಾಗಿ ದುಡಿದ ಪ್ರಮುಖರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಿಕೇರಿ ತಾಲೂಕು, ವಿವಿಧ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ ಕಾರುಗುಂದ ಗೌಡ ಸಮಾಜದಲ್ಲಿ ಇತ್ತೀಚೆಗೆ 1855ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಮತ್ತು ಸಮಾರೋಪ ಸಮಾರಂಭ ನಡೆಯಿುತು. ಶಿಬಿರದ ಯಶಸ್ವಿಗಾಗಿ ದುಡಿದ ಪ್ರಮುಖರನ್ನು ಈ ಸಂದರ್ಭ ಸನ್ಮಾನಿಸಲಾಯಿತು.

1855ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ , ಮಡಿಕೇರಿ ನಗರಸಭೆ ಮಾಜಿ ಸದಸ್ಯ ಟಿ.ಎಂ ಅಯ್ಯಪ್ಪ, ಸಮಿತಿ ಅಧ್ಯಕ್ಷ , ಕಾರುಗುಂದ ಗೌಡ ಸಮಾಜದ ಕಾರ್ಯದರ್ಶಿ ಬೆಳ್ಯನ ಚಂದ್ರಪ್ರಕಾಶ್ , ಸಮಿತಿ ಕೋಶಾಧಿಕಾರಿ ಮಿಲನ್ ಮುತ್ತಣ್ಣ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಶಿಬಿರಾಧಿಕಾರಿ ನಂದಕುಮಾರ್ ಪಟ್ಟಡ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆರೋಗ್ಯ ಸಹಾಯಕಿ ನೇತ್ರಾವತಿ ಇವರುಗಳನ್ನು ಶಿಬಿರದ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ರಾಣಿ ಮಾಚಯ್ಯ, ಭಾರತ ಸರ್ಕಾರ ಕಾಫಿ ಮಂಡಳಿ ನಿರ್ದೇಶಕ ತಳೂರು ಕಿಶೋರ್ ಕುಮಾರ್, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ, ಹೊಸೂರು ಜೆ. ಸತೀಶ್ ಕುಮಾರ್, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಪಟ್ಟಮಾಡ ಡಿ. ಪೊನ್ನಪ್ಪ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ್ ಅಗೋಳಿಕಜೆ, ಕೊಡಗು ಜಿಲ್ಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಲೀಲಾವತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಇದ್ದರು.