ಮರಸು ಕಾಲೋನಿ ಮುಖ್ಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

| Published : Jun 19 2025, 11:51 PM IST

ಮರಸು ಕಾಲೋನಿ ಮುಖ್ಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಿರ್ವಹಿಸಬೇಕು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅಂತಹ ರಸ್ತೆಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅತಿ ಅವಶ್ಯಕವಿರುವ ರಸ್ತೆಗಳನ್ನು ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಆಲೂರು

ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಿರ್ವಹಿಸಬೇಕು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮರಸು ಕಾಲೋನಿ ಮುಖ್ಯ ರಸ್ತೆಗೆ ಎಸ್‌ಇಪಿ ಅನುದಾನದಡಿಯಲ್ಲಿ ಸುಮಾರು 35 ಲಕ್ಷ ರು. ವೆಚ್ಚದ ಸಿಮೆಂಟ್‌ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಆದಷ್ಟು ಬೇಗ ರಸ್ತೆ ಕಾಮಗಾರಿ ಆಗಬೇಕು ಎನ್ನುವುದು ಈ ಭಾಗದ ಜನರ ಬೇಡಿಕೆಯಾಗಿತ್ತು. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅಂತಹ ರಸ್ತೆಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅತಿ ಅವಶ್ಯಕವಿರುವ ರಸ್ತೆಗಳನ್ನು ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಂಜುನಾಥ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೂವಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ನಿಂಗರಾಜು, ಧರ್ಮ, ತೌಫಿಕ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಅಬ್ಬನ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್ ಹಾಗೂ ಇತರರು ಉಪಸ್ಥಿತರಿದ್ದರು.