ಬಾಂಗ್ಲಾ ಹಿಂಸಾಚಾರ ವಿರುದ್ಧ ಹರಿಹರದಲ್ಲೂ ಖಂಡನೆ

| Published : Aug 13 2024, 12:58 AM IST

ಬಾಂಗ್ಲಾ ಹಿಂಸಾಚಾರ ವಿರುದ್ಧ ಹರಿಹರದಲ್ಲೂ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಹರಿಹರ ತಾಲೂಕು ಘಟಕದಿಂದ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಲತಾ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

- ಗ್ರೇಡ್-2 ತಹಸೀಲ್ದಾರ್ ಪುಷ್ಪಲತಾ ಮೂಲಕ ರಾಷ್ಟ್ರಪತಿಗೆ ಮನವಿ- - - ಕನ್ನಡಪ್ರಭ ವಾರ್ತೆ ಹರಿಹರ

ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಹರಿಹರ ತಾಲೂಕು ಘಟಕದಿಂದ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಲತಾ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಹಾಗೂ ಇತರರು ಗಾಂಧಿ ವೃತ್ತದಲ್ಲಿ ಕೆಲ ಸಮಯ ಮಾನವ ಸರಪಳಿ ನಿರ್ಮಿಸಿ, ಸರ್ಕಾರ ಹಿಂದೂಗಳ ರಕ್ಷಣೆ ಮಾಡಬೇಕು ಎಂದು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮಾತನಾಡಿ, ನೆರೆಯ ಬಾಂಗ್ಲಾ ದೇಶ ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾ ಪ್ರಧಾನಿ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. ಪ್ರಸ್ತುತ ಬಾಂಗ್ಲಾದಲ್ಲಿನ ಹಿಂಸಾಚಾರದ ದೃಶ್ಯಗಳನ್ನು ಗಮನಿಸಿದರೆ ಅವರಲ್ಲಿ ಮನುಷ್ಯತ್ವದ ಗುಣವೇ ಇಲ್ಲವಾಗಿದೆ. ಅಲ್ಲಿಯ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಭಾರತ ಸರ್ಕಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶಾಸಕ ಬಿ.ಪಿ ಹರೀಶ್, ಬಿಜೆಪಿ ಮುಖಂಡರಾದ ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್, ಬಿಜೆಪಿ ಅಧ್ಯಕ್ಷ ಅಜಿತ್ ಸಾವಂತ್, ದೂಡಾ ಮಾಜಿ ಸದಸ್ಯ ರಾಜು ರೋಖಡೆ, ಬಾತಿ ಚಂದ್ರಶೇಖರ್, ಹಿಂದೂ ಜಾಗರಣ ವೇದಿಕೆಯ ದಿನೇಶ್, ಕೃಷ್ಣಮೂರ್ತಿ ಶ್ರೇಷ್ಠಿ, ಶಿವಪ್ರಕಾಶ್ ಶಾಸ್ತ್ರಿ, ರಾಘವೇಂದ್ರ ಉಪಾಧ್ಯಾಯ, ಶಿವಕುಮಾರ್, ಚಂದ್ರಕಾಂತ್, ಮಂಜನಾಯಕ್, ತುಳುಜಪ್ಪ ಭೂತೆ, ಪ್ರಕಾಶ್‍ವಡ್ನಾಳ್, ಡಾ.ಖಮಿತ್ಕರ್, ಸ್ವಾತಿ ಹನುಮಂತ, ಪರಶುರಾಮ ಕಾಟ್ವೆ, ರೂಪಾ ಕಾಟ್ವೆ, ಸುಮನ್ ಖಮಿತ್ಕರ್, ಅಂಬುಜಾ ರಾಜೋಳಿ, ಪ್ರಮೀಳಾ ನಲ್ಲೂರ್ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.

- - - -ಎಚ್‍ಆರ್‌ಆರ್12ಹಿಂದೂ1:

ಹರಿಹರ ತಾಲೂಕು ಹಿಂದೂ ಹಿತರಕ್ಷಣಾ ಸಮಿತಿಯಿಂದ ಸೋಮವಾರ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಒತ್ತಾಯಿಸಿ ಗ್ರೇಡ್-2 ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.