ಕುರುಗೋಡು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಸಮೀಪದ ಕುಡತಿನಿಯ ಕೆಪಿಟಿಸಿಎಲ್ ಬಳಿ ಬುಧವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಮಿತಿ ಹಾಗೂ ಥರ್ಮಲ್ ಸ್ಟೇಷನ್ ಗುತ್ತಿಗೆ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ಎಂ ತಿಪ್ಪೇಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರವು ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ರೈತರ ಹಕ್ಕುನ್ನು ಕಸಿದುಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಬೀಜ ಮಸೂದೆ, ವಿದ್ಯುತ್ ಮಸೂದೆ, ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿ ಮಾಡಿರುವುದು, ಸಾಮಾಜಿಕ ಭದ್ರತೆ ಇಲ್ಲದ, ಜನ ವಿರೋಧಿ ನೀತಿಯಾಗಿದೆ. ಇದನ್ನು ವಿರೋಧಿಸಿ ಇಂದು ಕರಾಳ ದಿನ ಆಚರಿಸಲಾಗುತ್ತಿದೆ ಎಂದರು.ವಿದೇಶ ಬಂಡವಾಳ ಆಕರ್ಷಣೆ ಎಂದು ಪ್ರಧಾನಮಂತ್ರಿ ವಿದೇಶ ಸುತ್ತುತ್ತಿದ್ದಾರೆ. ಭೂಮಿ ಕೊಳ್ಳೆ ಹೊಡೆದು ಉದ್ಯಮಿಗಳಿಗೆ ಮಾತ್ರ ನೀಡುತ್ತಿದ್ದಾರೆ. ಯಾವುದೇ ಉದ್ಯೋಗ ಸೃಷ್ಟಿ ಇಲ್ಲ. ದುಡಿಯುವ ಕೈಗಳಿಗೆ ಕೆಲಸವಿಲ್ಲ. ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದ್ದಾರೆ. ದೇಶದ ಸಾಲ ಜಾಸ್ತಿಯಾಗಿದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ, ಪ್ರಮುಖರಾದ ಜಗದೀಶ್, ರುದ್ರಮ್ಮ, ಮಲ್ಲಮ್ಮ, ಸುನಿತಾ, ಭಾಗ್ಯಮ್ಮ, ಚಂದ್ರಮ್ಮ ಇದ್ದರು.ಕುರುಗೋಡು ಸಮೀಪದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕುಡತಿನಿಯ ಕೆಪಿಟಿಸಿಎಲ್ ಬಳಿ ಬುಧವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಮಿತಿ ಹಾಗೂ ಥರ್ಮಲ್ ಸ್ಟೇಷನ್ ಗುತ್ತಿಗೆ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.