ಸಾರಾಂಶ
ಬಸ್‌ನಲ್ಲಿ ಟಿಕೆಟ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮರಾಠಿಯಲ್ಲಿ ಯುವಕ ಮಾತನಾಡುವಂತೆ ಹೇಳಿದ್ದಾನೆ. ಆದರೆ, ನಿರ್ವಾಹಕ ಕನ್ನಡಿದಲ್ಲಿಯೇ ಮಾತನಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ದಾಖಲಿಸಿರುವುದು ತಪ್ಪು, ಇದನ್ನು ಕೈಬಿಡಬೇಕು.
ಕೊಪ್ಪಳ:
ಬೆಳಗಾವಿಯಲ್ಲಿ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿಗೆ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಮುಖಾಂತರ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.ಬಸ್‌ನಲ್ಲಿ ಟಿಕೆಟ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮರಾಠಿಯಲ್ಲಿ ಯುವಕ ಮಾತನಾಡುವಂತೆ ಹೇಳಿದ್ದಾನೆ. ಆದರೆ, ನಿರ್ವಾಹಕ ಕನ್ನಡಿದಲ್ಲಿಯೇ ಮಾತನಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ದಾಖಲಿಸಿರುವುದು ತಪ್ಪು, ಇದನ್ನು ಕೈಬಿಡಬೇಕು ಆಗ್ರಹಿಸಿದ್ದಾರೆ.
ನಿರ್ವಾಹಕರ ಮೇಲೆ ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಿರುವುದು ಖಂಡನೀಯ. ಇದು ಅತ್ಯಂತ ಅಮಾನವೀಯ ಘಟನೆಯಾಗಿದೆ. ತಕ್ಷಣ ಹಲ್ಲೆ ಮಾಡಿರುವ ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಸಾರಿಗೆ ನೌಕರರ ಸುರಕ್ಷತೆಗಾಗಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಪೋಕ್ಸೋ ಪ್ರಕರಣ ದಾಖಲಿಸಲು ಕಾರಣರಾಗಿರುವ ಬೆಳಗಾವಿ ನಗರ ಪೊಲೀಸ್ ಕಮಿಷನರ್ ವರ್ಗಾಯಿಸಬೇಕು. ರಾಜ್ಯದ ಎಲ್ಲ ನಗರ ಹಾಗೂ ಗ್ರಾಮೀಣ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಚೌಕಿ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ವಿಭಾಗೀಯ ಅಧ್ಯಕ್ಷ ಬಸಯ್ಯ ಕಡ್ಲಿ, ಪ್ರಧಾನ ಕಾರ್ಯದರ್ಶಿ ಎ.ಬಿ. ದಿಂಡೂರ, ರಾಜ್ಯ ಜಂಟಿ ಕಾರ್ಯದರ್ಶಿ ಎ.ಜಿ. ಮಣ್ಣೂರ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಮಲ್ಲಪ್ಪ ನೂಟಗಾರ, ಸತೀಶ ಮುಚ್ಚಂಡಿ, ಬಿ.ಕೆ. ಮುದೇನೂರು, ಶಿವಕುಮಾರ ಬೀಳಗಿಮಠ, ಗೂಡುಸಾಬ್ ಸವಡಿ, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಅನೇಕರು ಆಗ್ರಹಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))