ಸಾರಾಂಶ
ಬೆಳಗಾವಿಯ ಸುವರ್ಣಸೌಧ ಬಳಿ ಪಂಚಮಸಾಲಿ ಸಮುದಾಯವರ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜದವರು ತಾಲೂಕು ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಅಗ್ರಹಿಸಿದರು.
ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಬೆಳಗಾವಿಯ ಸುವರ್ಣಸೌಧ ಬಳಿ ಪಂಚಮಸಾಲಿ ಸಮುದಾಯವರ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜದವರು ತಾಲೂಕು ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಅಗ್ರಹಿಸಿದರು.ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು ಹಾಗೂ ರಾಜ್ಯ ಸರ್ಕಾರ ಪಂಚಮಸಮುದಾಯದವರ ಕ್ಷಮೆಯಾಚಿಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಪಟ್ಟರಾಜಗೌಡ ಅವರಿಗೆ ಪಂಚಮಸಾಲಿ ಸಮುದಾಯದ ಮುಖಂಡರು ಮನವಿ ಅರ್ಪಿಸಿದರು.ವೀರಶೈವ ಪಂಚಮಸಾಲಿ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ ಪಟ್ಟಣಶೆಟ್ಟಿ ಮಾತನಾಡಿ,ಕಾನೂನು ಚೌಕಟ್ಟಿನಲ್ಲಿಯೇ ಬೆಳಗಾವಿಯ ಸುವರ್ಣಸೌಧದ ಬಳಿ ನಮ್ಮ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾಗ ಏಕಾಏಕಿ ಪೊಲೀರು ಪ್ರತಿಭಟನಡಗಾರರ ಮೇಲೆ ಲಾಠಿ ಪ್ರಹಾರ ಮಾಡಿ,ದೈಹಿಕ ಹಿಂಸೆ ನೀಡಿ ದೌರ್ಜನ್ಯ ಎಸಗಿದ್ದಾರೆ,ಇದೊಂದು ಪೂರ್ವನಿಯೋಜಿತ ಕೃತ್ಯ,ಕೂಡಲೇ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿ ಪ್ರತಿಭಟನೆಯ ಹಾದಿ ತಪ್ಪಿಸಿದ ಪೊಲೀಸ್ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.ವೀರಶೈವ ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ವೀರಣ್ಣ ಬೆನಕನಹಳ್ಳಿ ಮಾತನಾಡಿ,ಕಳೆದ ನಾಲ್ಕು ವರ್ಷಗಳಿಂದ ನಮ್ಮ ಸಮಾಜ ಪ್ರಮುಖರೆಲ್ಲರೂ 2ಎ ಮೀಸಲಾತಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ.ಆದರೆ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿ ದೈಹಿಕ ಹಲ್ಲೆ ನಡೆಸಿದ ಕೃತ್ಯವನ್ನು ಯಾರೂ ಮಾಡಿರಲಿಲ್ಲ, ಆದರೆ ಈ ಸರ್ಕಾರ ಅವಧಿಯಲ್ಲಿ ನಮ್ಮ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿ ಮಾನಸಿಕವಾಗಿ ಕುಗ್ಗಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ,ಈ ಕೂಡಲೆ ಸರ್ಕಾರ ನಮ್ಮ ಸ್ವಾಮೀಜಿಗಳ ಹಾಗೂ ಪಂಚಮಸಾಲಿ ಸಮಾಜದ ಕ್ಷಮೆಯಾಚಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಕುಂಕೋದ್,ಟಿಎಪಿಸಿಎಂಎಸ್ ಅಧ್ಯಕ್ಷ ಕಾಯಿ ಬಸವರಾಜ್,ಯುವ ಘಟಕದ ಅಧ್ಯಕ್ಷ ಸಾಯಿ ಹಾಲೇಶ್,ನಗರ ಘಟಕದ ಅಧ್ಯಕ್ಷ ಗಿರೀಶ್,ಪುರಸಭಾ ಮಾಜಿ ಸದಸ್ಯ ಪೇಟೆ ಪ್ರಶಾಂತ್,ಮೃತ್ಯುಂಜಯ ಪಾಟೀಲ್,ಕಾಶಿನಾಥ್,ಮಹಾಂತೇಶ್,ಕೊಟ್ರೇಶ್,ರುದ್ರಣ್ಣ,ವಿಶ್ವಣ್ಣ ಹಾಗೂ ನೂರಾರು ಪಂಚಮಸಾಲಿ ಸಮಾಜದ ಪ್ರಮುಖರು ಇದ್ದರು.