ತೈಲ ಬೆಲೆ ಏರಿಕೆಗೆ ಖಂಡನೆ: ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

| Published : Jun 21 2024, 01:02 AM IST

ತೈಲ ಬೆಲೆ ಏರಿಕೆಗೆ ಖಂಡನೆ: ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಬಳಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಗುರುವಾರ ಪುತ್ತೂರಿಲ್ಲಿ ಪ್ರತಿಭಟನೆ ನಡೆಸಲಾಯಿತು.ಪುತ್ತೂರಿನ ಖಾಸಗಿ ಬಸ್‌ ನಿಲ್ದಾಣದಿಂದ ಕಾಲ್ನಡಿಗೆಯ ಮೂಲಕ ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಬಳಿಗೆ ತೆರಳಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪುತ್ತೂರಿನ ಬಸ್‌ ನಿಲ್ದಾಣದ ಬಳಿಯ ಗಾಂಧಿ ಕಟ್ಟೆಯ ಬಳಿಯಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಬೆಲೆ ಏರಿಕೆಯ ಮೂಲಕ ಸಿದ್ದರಾಮಯ್ಯ ಸರ್ಕಾರವು ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ. ಕುಕ್ಕರ್ ಬಾಂಬ್ ಇನ್ನಿತರ ದೇಶದ್ರೋಹದ ಪ್ರಕರಣದಲ್ಲಿ ಸಮರ್ಪಕವಾಗಿ ನಿಭಾಯಿಸಲಾರದ ಸರ್ಕಾರವು ಹಿಂದೂ ವಿರೋಧಿ ನೀತಿಯ ಜೊತೆಗೆ ಬೆಲೆ ಏರಿಕೆಯನ್ನು ಹೇರುವ ಕೆಲಸ ಮಾಡುತ್ತಿದೆ. ತೈಲ ಬೆಲೆ ಇಳಿಕೆ ಮಾಡದಿದ್ದಲ್ಲಿ ಸಿದ್ದರಾಮಯ್ಯ ಅವರ ಮನೆಯ ಮುಂದೆ ಬ್ರಹತ್ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಪುಡಾ ಮಾಜಿ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪಕ್ಷದ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ವಿದ್ಯಾಗೌರಿ, ಗೌರಿ ಬನ್ನೂರು, ಹರೀಶ್ ಬಿಜತ್ರೆ ಮತ್ತಿತರು ಪಾಲ್ಗೊಂಡಿದ್ದರು.