ಸಾರಾಂಶ
ಕಾಶ್ಮೀರದ ಪಹಲ್ಗಾಂನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ಜನಶಕ್ತಿ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ದಾವಣಗೆರೆ: ಕಾಶ್ಮೀರದ ಪಹಲ್ಗಾಂನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ಜನಶಕ್ತಿ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
2019ರ ಪುಲ್ವಾಮಾ ದಾಳಿಯ ನಂತರ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್ ಎ ತೈಬಾ ಗುಂಪಿನ ಜೊತೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ ಎಂಬ ವರದಿಗಳು ಕೇಳಿಬರುತ್ತಿವೆ. ಈ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಉದ್ಯಮಿ ಮಂಜುನಾಥ್, ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ದಾಳಿಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಪ್ರವಾಸಿ ತಾಣಗಳಲ್ಲಿ ಸೂಕ್ತ ಭದ್ರತೆ ಸಹ ಹೆಚ್ಚು ಮಾಡಬೇಕಿದೆ. ಕಾಶ್ಮೀರದಲ್ಲಿ ನರಮೇಧ ನಡೆಸಿದ ಭಯೋತ್ಪಾದಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಆದಿಲ್ ಖಾನ್, ಕೆ.ರವೀಂದ್ರ, ಸೈಯದ್ ಅಶ್ಫಾಕ್, ಸತೀಶ್ ಅರವಿಂದ್, ಬಾಷಾ, ಶೇರ್ ಅಲಿ, ರಾಮ ಆಂಜನೇಯ, ಪವಿತ್ರ, ಮಂಜುನಾಥ್ ಇತರರು ಇದ್ದರು.
- - - (** ಈ ಫೋಟೋ-ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಿ)-28ಕೆಡಿವಿಜಿ31.ಜೆಪಿಜಿ:
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ, ಸಾವಿಗೀಡಾದ ಪ್ರವಾಸಿಗರ ಕುಟುಂಬಗಳಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಜನಶಕ್ತಿ ವತಿಯಿಂದ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಆದಿಲ್ ಖಾನ್, ಕೆ.ರವೀಂದ್ರ, ಸೈಯದ್ ಅಶ್ಫಾಕ್, ಸತೀಶ್ ಅರವಿಂದ್ ಇತರರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))