ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹತ್ಯೆಗೊಳಗಾದ ಹಿಂದೂ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಪಟ್ಟಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕ್ಯಾಂಡಲ್ ಹಿಡಿದು ಮೌನಾಚರಣೆ ಸಲ್ಲಿಸಿದರು.ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಕುವೆಂಪು ವೃತ್ತದ ಬಳಿ ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ಹಾಗೂ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ನೇತೃತ್ವದಲ್ಲಿ ಬುಧವಾರ ರಾತ್ರಿ ಕ್ಯಾಂಡಲ್ ಹಿಡಿದು ಉಗ್ರರ ದಾಳಿಗೆ ಬಲಿಯಾದ ಹಿಂದೂ ಪ್ರವಾಸಿಗರು ಆತ್ಮಕ್ಕೆ ಶಾಂತಿ ಕೋರಿದರು.
ಶಾಸಕರ ಹೇಳಿಕೆಗೆ ಖಂಡನೆ:ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದ ಪರಿಣಾಮ ಉಗ್ರರ ಕೃತ್ಯಗಳು ಹೆಚ್ಚಾಗುತ್ತಿವೆ. ಘಟನೆಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೇ ನೇರ ಹೊಣೆ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿಕೆಯನ್ನು ಖಂಡಿಸಿದರು. ದೇಶದ ಭದ್ರತೆ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಶಾಸಕರು ಕೂಡಲೇ ಕ್ಷಮೆ ಕೋರಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಿ.ಹಳ್ಳಿ ರಮೇಶ್, ಪುರಸಭೆ ಸದಸ್ಯ ಎಸ್.ಪ್ರಕಾಶ್, ಸಂತೋಷ್ ಕುಮಾರ್, ರಘು, ಲಕ್ಮಿನಾರಾಯಣ್, ರಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.ಇಂದು ವಿದ್ಯುತ್ ವ್ಯತ್ಯಯ
ಮಂಡ್ಯ:66/11 ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-3 ಯಲಿಯೂರು ಮತ್ತು ಎಫ್-4 ಉರಮಾರಕಸಲಗೆರೆ ಕೃಷಿ ಫೀಡರ್‌ಗಳಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಏ.25 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ತಾಲೂಕಿನ ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳ್ಳಿ ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.