ಸಾರಾಂಶ
ಸವಣೂರ ತಾಲೂಕಿನ ಬೇವಿನಹಳ್ಳಿ ಗ್ರಾಮದಿಂದ ಸಂಗೊಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ಶಿಗ್ಗಾಂವಿ-ಸವಣೂರ ಮಾರ್ಗ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ತಲಾ 1 ಲಕ್ಷ ರು. ಪರಿಹಾರ ನೀಡಿದರು.
ಹಾವೇರಿ: ಸವಣೂರ ತಾಲೂಕಿನ ಬೇವಿನಹಳ್ಳಿ ಗ್ರಾಮದಿಂದ ಸಂಗೊಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ಶಿಗ್ಗಾಂವಿ-ಸವಣೂರ ಮಾರ್ಗ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ತಲಾ 1 ಲಕ್ಷ ರು. ಪರಿಹಾರ ನೀಡಿದರು.
ಶನಿವಾರ ಸಂಭವಿಸಿದ ಅಪಘಾತದಲ್ಲಿ ನೀಲಪ್ಪ ಮೂಲಿಮನಿ, ಶಿವನಗೌಡ ಯಲ್ಲನಗೌಡ್ರ, ಸುದೀಪ್ ಕೋಟಿ, ಕಲ್ಮೇಶ ಮಾನೋಜೀ ಮೃತಪಟ್ಟಿದ್ದರು. ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಫೋನ್‌ನಲ್ಲಿ ಚರ್ಚಿಸಿ ಸರ್ಕಾರದಿಂದ ತಲಾ 2 ಲಕ್ಷ ರು. ಪರಿಹಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಸೋಮಣ್ಣ ಬೇವಿನಮರದ ಇತರರು ಇದ್ದರು.