ಸಾರಾಂಶ
ಸಕಲೇಶಪುರ ತಾಲೂಕು ಬೈಕೆರೆ ಗ್ರಾಮದವರು ಹಾಗೂ ಹಿರಿಯ ಅಧಿಕಾರಿಗಳಾದ ಹಾಗೂ ವೀರಶೈವ ಲಿಂಗಾಯತ ಮುಖಂಡರಾದ ಬೈಕೆರೆ ನಾಗೇಶ್ ನಿಧನರಾದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಂಗಳವಾರ ಸಂತಾಪ ಸೂಚಿಸಲಾಯಿತು.
ಸಭೆ । ಮಹಾಸಭಾದ ಜಿಲ್ಲಾ ಸಮಿತಿ ಆಯೋಜನೆ । ಜವೇನಹಳ್ಳಿ ಮಠದ ಮಠಾಧೀಶ ಸಂಗಮೇಶ್ವರ ಸ್ವಾಮೀಜಿ ಸಾನಿಧ್ಯಕನ್ನಡಪ್ರಭ ವಾರ್ತೆ ಹಾಸನ
ಸಕಲೇಶಪುರ ತಾಲೂಕು ಬೈಕೆರೆ ಗ್ರಾಮದವರು ಹಾಗೂ ಹಿರಿಯ ಅಧಿಕಾರಿಗಳಾದ ಹಾಗೂ ವೀರಶೈವ ಲಿಂಗಾಯತ ಮುಖಂಡರಾದ ಬೈಕೆರೆ ನಾಗೇಶ್ ನಿಧನರಾದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಮಂಗಳವಾರ ಸಂತಾಪ ಸೂಚಿಸಲಾಯಿತು.ನಗರದ ಜವನಹಳ್ಳಿ ಮಠದಲ್ಲಿ ನಡೆದ ಜಿಲ್ಲಾ ಸಮಿತಿಯ ಸಭೆಯ ಸಾನಿಧ್ಯವನ್ನು ಜವೇನಹಳ್ಳಿ ಮಠದ ಮಠಾಧೀಶ ಸಂಗಮೇಶ್ವರ ಸ್ವಾಮೀಜಿ ವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಬಿ.ಆರ್. ಗುರುದೇವ್ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಸಮಿತಿಯ ಸಭೆಯ ಸಭೆ ನಡೆಸಿ ಬೈಕೆರೆ ನಾಗೇಶ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು.
ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಬಿ.ಆರ್. ಗುರುದೇವ್ ಮಾತನಾಡಿ, ಬೈಕೆರೆ ನಾಗೇಶ್ ಪ್ರಾಥಮಿಕ ಶಾಲಾ ಶಿಕ್ಷಣ ತಮ್ಮ ಗ್ರಾಮದಲ್ಲಿ ಮಾಡಿ, ಮೈಸೂರಿನಲ್ಲಿ ವ್ಯಾಸಂಗ ಪೂರೈಸಿ ಮೈಸೂರಿನಲ್ಲೇ ಕೆಲಸ ಮಾಡುತ್ತಿದ್ದರು. ನಂತರ ಕೇಂದ್ರ ಸರ್ಕಾರದ ರೈಲ್ವೆ ಸಚಿವರಾಗಿದ್ದ ಜಾಫರ್ ಷರೀಫ್ ರವರ ಬಳಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅವರು ತಮ್ಮ ಗ್ರಾಮದಲ್ಲಿ ಅನೇಕ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಎಲ್ಲಾ ಸಮಾಜದವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು. ತಮ್ಮ ಕೈಲಾದ ಸಹಾಯ ಮಾಡುವ ಗುಣ ಇವರದ್ದು ಎಂದು ನೆನಪಿಸಿಕೊಂಡರು.ನಾಗೇಶ್ ಅವರ ಅಂತ್ಯಕ್ರಿಯೆ ಜ.24 ರಂದು ಅವರ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ೬ ಗಂಟೆಯಿಂದ ೧೨ ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಂತ್ಯಕ್ರಿಯೆ ನಡೆಯಿತು ಎಂದು ತಿಳಿಸಿದರು. ಸಭೆಗೆ ಮೊದಲು ಎರಡು ನಿಮಿಷ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.
ಇದೇ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕನಾಯಕನಹಳ್ಳಿ ಮಹದೇವ್. ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬೇಲೂರು ತಾಲೂಕು ಅಧ್ಯಕ್ಷ ಬಿ.ಎಂ. ರವಿಕುಮಾರ್, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ. ಎನ್. ಪರಮೇಶ್. ಅರಕಲಗೂಡು ತಾಲೂಕಿನ ಅಧ್ಯಕ್ಷ ಎನ್ ರವಿಕುಮಾರ್. ಜಿಲ್ಲಾ ಯುವ ಘಟಕದ ಅಧ್ಯಕ್ಷ ಅನುಪ್ ರಾಜ್ ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿ ಎ.ಪಿ.ನಂದೀಶ್, ಅರಕಲಗೂಡು ತಾಲೂಕಿನ ಪ್ರಧಾನ ಕಾರ್ಯದರ್ಶಿ ಎಸ್. ಯೋಗೀಶ್ ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯದರ್ಶಿ ಶೋಭನ್ ಬಾಬು, ಹಾಸನ ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಯುವ ಘಟಕದ ಅಧ್ಯಕ್ಷ ಅವಿನಾಶ್. ಆಲೂರು ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಕಟ್ಟೆ ಗದ್ದೆ ನಾಗರಾಜ್, ವೀರಶೈವ ಮಹಾಸಭಾದ ಜಿಲ್ಲಾ ನಿರ್ದೇಶಕ ಎಂ.ಎನ್. ಕುಮಾರ್ ಸ್ವಾಮಿ ಇತರರು ಉಪಸ್ಥಿತರಿದ್ದರು.ಹಾಸನ ನಗರದ ಜವೇನಹಳ್ಳಿ ಮಠದ ಆವರಣದಲ್ಲಿ ನಡೆದ ಸಂತಾಪ ಸಭೆ.