ವಿವಿಧ ಮಠಾಧೀಶರಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬಕ್ಕೆ ಸಾಂತ್ವನ

| Published : Aug 08 2024, 01:32 AM IST

ವಿವಿಧ ಮಠಾಧೀಶರಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬಕ್ಕೆ ಸಾಂತ್ವನ
Share this Article
  • FB
  • TW
  • Linkdin
  • Email

ಸಾರಾಂಶ

ಮಳವಳ್ಳಿ ತಾಲೂಕು ಪೂರಿಗಾಲಿ ಗ್ರಾಮದ ದಿ.ಪಿ.ಎಂ.ಮಲ್ಲಯ್ಯ ಸಮಾಧಿಗೆ ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರೆ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮನೆಗೆ ಭೇಟಿ ನೀಡಿ ದಿ.ಪಿ.ಎಂ.ಮಲ್ಲಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎಂ.ಮಲ್ಲಯ್ಯ ನಿಧನರಾದ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರು ಬುಧವಾರ ಪೂರಿಗಾಲಿಯ ಶಾಸಕರ ನಿವಾಸಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಹಾಗೂ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಭೇಟಿ ನೀಡಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತರ ಪತ್ನಿ ಮಹದೇವಮ್ಮ, ಮುಖಂಡರಾದ ಪಿ.ಎಂ.ಪರಶಿವಮೂರ್ತಿ, ಆರ್.ಎನ್.ವಿಶ್ವಾಸ್, ಯುವರಾಜು ಇದ್ದರು.

ತರಬೇತಿ ಸಂಸ್ಥೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಳವಳ್ಳಿ: ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರವೇಶಕ್ಕೆ ಆರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಲಭ್ಯವಿರುವ ನಾಲ್ಕು ಕೋರ್ಸ್ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹು. ಹೆಚ್ಚಿನ ಮಾಹಿತಿಗಾಗಿ ಆರ್.ನವೀನ್ ಕುಮಾರ್-ಮೊ-9880175939 ಹಾಗೂ ಕೆ.ಎನ್.ರವಿಕುಮಾರ್-ಮೊ9731715151 ಸಂಪರ್ಕಿಸಬಹುದು ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

ಇಂದು ತಿಂಗಳ ಅತಿಥಿ ಕಾರ್ಯಕ್ರಮ

ಮಂಡ್ಯ: ಸೇವಾಕಿರಣ ಚಾರಿಟಬಲ್‌ ಟ್ರಸ್ಟ್‌ನಿಂದ ಆ.8ರಂದು ಬೆಳಗ್ಗೆ 10.30ಗಂಟೆಗೆ ತಿಂಗಳ ಅತಿಥಿ ಕಾರ್ಯಕ್ರಮ ಸುಭಾಷ್‌ನಗರದ ಸೇವಾಕಿರಣ ಸಭಾಂಗಣದಲ್ಲಿ ನಡೆದಿದೆ. ಉದ್ಘಾಟನೆಯನ್ನು ತಹಸೀಲ್ದಾರ್‌ ಶಿವಕುಮಾರ್ ಬಿರಾದಾರ್‌ ನೆರವೇರಿಸಿದರು. ಅಧ್ಯಕ್ಷತೆಯನ್ನು ಸೇವಾಕಿರಣ ಉಚಿತ ವೃದ್ಧಾಶ್ರಮ ಬಿ.ಸಿ.ಶಿವಾನಂದ ವಹಿಸಿದ್ದರು. ಪ್ರಾಸ್ತಾವಿಕ ನುಡಿಯನ್ನು ಸೇವಾಕಿರಣ ವೃದ್ಧಾಶ್ರಮ ಕಾರ್ಯದರ್ಶಿ ಜಿ.ವಿ.ನಾಗರಾಜು ನುಡಿಯುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಎಸ್‌. ಆತ್ಮಾನಂದ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಕೋಮಲ್‌ಕುಮಾರ್‌, ಸಮಾಜಸೇವಕ ಅಂದಾನಿ, ಲಯನ್ಸ್‌ ಸಂಸ್ಥೆ ಕೆ.ಟಿ.ಹನುಮಂತು, ನಿವೃತ್ತ ಪ್ರಾಂಶುಪಾಲ ಜಿ.ವಿ.ಕುಮಾರ್‌ ಪಾಲ್ಗೊಳ್ಳುವರು.

ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಮಂಡ್ಯ: ಜಿಲ್ಲಾ ಪಂಚಾಯ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯ ವಿವಿಧೆಡೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಆಗಸ್ಟ್ 9ರಂದು ಚಿನಕುರಳಿ ಸರ್ಕಾರಿ ಆರೋಗ್ಯ ಕೇಂದ್ರ, ಆ.13 ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, ಆ.14ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, ಆ.17ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, ಆ.20 ರಂದು ಪಾಂಡವಪುರ ಉಪ ವಿಭಾಗ ಸರ್ಕಾರಿ ಆರೋಗ್ಯ ಕೇಂದ್ರ, ಆ.21 ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, ಆ.22 ರಂದು ಮದ್ದೂರು ತಾಲೂಕು ಆಸ್ಪತ್ರೆ, ಆ.23 ರಂದು ಮಂಡ್ಯ ಮಿಮ್ಸ್, ಆ.27 ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, ಆ.28ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಪಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.